ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಎಂದು ಕೇಳಿದ್ದೇನೆ: ವಿ.ಸೋಮಣ್ಣ

ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಕೊಡಿ ಎಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಹೇಳಿದ್ದಾರೆ.
ಸೋಮಣ್ಣ
ಸೋಮಣ್ಣ

ಬೆಂಗಳೂರು: ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಕೊಡಿ ಎಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ‘ರಾಜ್ಯದ ಯಾವ ನಾಯಕರ ಜೊತೆಗೂ ನಾನು ಮಾತನಾಡಿಲ್ಲ. ಇವರ ಕೈಯಲ್ಲಿ ಆಗದ ಕೆಲಸ ನಾನು ಮಾಡಿದ್ದೇನೆ. ಪ್ರಾಣದ ಹಂಗು ತೊರೆದು ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನಾನು ಸೋತಿರಬಹುದು. ಆದರೆ, ಕೊಟ್ಟ ಟಾಸ್ಕ್​​ನಲ್ಲಿ ಸೋತಿಲ್ಲ ಎಂದಿದ್ದಾರೆ.

ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ಕೇಳಿದ್ದು ನಿಜ. ನನಗೆ 100 ದಿನ ಅವಕಾಶ ನೀಡಿದರೆ ಸಾಕು. ಒಬ್ಬ ರಾಜ್ಯಾಧ್ಯಕ್ಷ ಹೇಗೆ ಕೆಲಸ ಮಾಡಬೇಕು ಎಂಬುದನ್ನು ತೋರಿಸುವೆ ಎಂದು ಮಾಜಿ ಸಚಿವ ಹೇಳಿದ್ದಾರೆ.

ಕಳೆದ 15 ವರ್ಷಗಳಿಂದ ನಾನು ಬಿಜೆಪಿಯಲ್ಲಿ ದುಡಿದಿದ್ದೇನೆ. ಪಕ್ಷವನ್ನು ತುಂಬಾ ಹತ್ತಿರದಿಂದ ಬಲ್ಲವನಾಗಿದ್ದೇನೆ. ನನಗೆ ನನ್ನದೇ ಆದಂತ 45 ವರ್ಷದ ಅನುಭವವಿದೆ. ಬಿಜೆಪಿ ಕೊಟ್ಟ ಅನೇಕ ಟಾಸ್ಕ್​ಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಕೆಟ್ಟ ಪರಿಸ್ಥಿತಿಯಲ್ಲಿ ಒಂದು ಅವಕಾಶ ಕೊಡಿ ಅಂತಾ ಕೇಳಿದ್ದೇನೆ. ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗಲು ಅವಕಾಶ ಕೇಳಿದ್ದೇನೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com