ಕೆಎನ್​ ರಾಜಣ್ಣ ಹೇಳಿಕೆ ಬೆನ್ನಲ್ಲೇ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ

ನಮ್ಮ ಸಮಾಜದಿಂದ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗಲಿ ಸಚಿವ ಕೆಎನ್ ರಾಜಣ್ಣ ಅವರು ಹೇಳಿದ ಬೆನ್ನಲ್ಲೇ ಸ್ವತಃ ಸತೀಶ್ ಜಾರಕಿಹೊಳಿ ಅವರು ಸಹ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Updated on

ತುಮಕೂರು: ನಮ್ಮ ಸಮಾಜದಿಂದ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗಲಿ ಸಚಿವ ಕೆಎನ್ ರಾಜಣ್ಣ ಅವರು ಹೇಳಿದ ಬೆನ್ನಲ್ಲೇ ಸ್ವತಃ ಸತೀಶ್ ಜಾರಕಿಹೊಳಿ ಅವರು ಸಹ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಇಂದು ತುಮಕೂರಿನಲ್ಲಿ ಕೆಎನ್ ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ ಅವರು, ನಾನೂ ಸಿಎಂ ಆಗುತ್ತೇನೆ. ಆದರೆ ಈಗ ಅಲ್ಲ ಮುಂದಿನ ಅವಧಿಯಲ್ಲಿ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರ ನಂತರ ತಾವೂ ಸಿಎಂ ಆಕಾಂಕ್ಷಿ ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್‌ ಸರ್ಕಾರದ ಅನ್ನಭಾಗ್ಯ ಯೋಜನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಈ ತಿಂಗಳು ಆಗಲಿಲ್ಲ ಅಂದ್ರೆ ಮುಂದಿನ ತಿಂಗಳಿಂದ ಅಕ್ಕಿ ಕೊಟ್ಟೇ ಕೊಡುತ್ತೇವೆ. 10 ಕೆಜಿ ಅಕ್ಕಿ ನೀಡುವುದು ತಡವಾಗಬಹುದು. ಆದರೆ 5 KG ಅಕ್ಕಿ ಈಗಾಗಲೇ ನೀಡಲಾಗುತ್ತಿದೆ ಎಲ್ಲಾ ರಾಜ್ಯಗಳಿಂದ ಹಾಗೂ ಕೇಂದ್ರದ ಸಂಸ್ಥೆಗಳಿಂದ ಅಕ್ಕಿ ತರಲು ಪ್ರಯತ್ನ ನಡೆಯುತ್ತಿದೆ ಎಂದರು.

5 ಕೆಜಿ ಜೊತೆ 10 ಕೆಜಿ ಅಕ್ಕಿ ನೀಡುವ ಬಿಜೆಪಿ ವಾದದ ಬಗ್ಗೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ತೆಗೆದು ನೋಡಲಿ 5 ಕೆ.ಜಿ‌ ಸೇರಿಸಿ 10ಕೆಜಿ ಕೊಡುತ್ತೇವೆ ಎಂದು ನಾವು ಹೇಳಿದ್ದೇವೆಯೇ ಹೊರತು 15 ಕೆಜಿ ಕೊಡುತ್ತೇವೆ ಎಂದು ಎಲ್ಲೂ ಹೇಳಿಲ್ಲ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com