ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಗ್ಯಾರಂಟಿಗಳ ಅನುಷ್ಠಾನಕ್ಕೆ ಯಡಿಯೂರಪ್ಪ ಪ್ರತಿಭಟನೆಗೆ ಕರೆ: 'ರಾಜಕೀಯ ಗಿಮ್ಮಿಕ್ ' ಎಂದ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ "ನೈತಿಕ ಹಕ್ಕಿಲ್ಲ, ಇದೊಂದು ರಾಜಕೀಯ ಗಿಮ್ಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ "ನೈತಿಕ ಹಕ್ಕಿಲ್ಲ, ಇದೊಂದು ರಾಜಕೀಯ ಗಿಮ್ಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಭರವಸೆಗಳನ್ನು ಜಾರಿಗೆ ತರಲು ಈಗಾಗಲೇ ಸರ್ಕಾರ ನಿರ್ಧಾರ ಕೈಗೊಂಡಿದೆ. ಬಿಜೆಪಿ ಪಕ್ಷದ ಅಧ್ಯಕ್ಷ, ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಅವರ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಜಾರಿಗೊಳಿಸಿದ್ದೀರಾ? ಇಲ್ಲ, ಹೀಗಿರುವಾಗ ಪ್ರತಿಭಟನೆಗೆ ಕರೆ ನೀಡುವುದಕ್ಕೆ ಅವರಿಗೆ ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದರು. 

ಕಾಂಗ್ರೆಸ್ 2013-18ನೇ ಸಾಲಿನವರೆಗೆ ಅಧಿಕಾರದಲ್ಲಿದ್ದಾಗ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಈ ಬಾರಿಯೂ ನೀಡಿರುವ ಎಲ್ಲಾ ಚುನಾವಣಾ ಭರವಸೆಗಳನ್ನು ಕಾರ್ಯಗತಗೊಳಿಸಲು ಈಗಾಗಲೇ  ನಿರ್ಧಾರವನ್ನು ತೆಗೆದುಕೊಂಡಿದ್ದೇವೆ.
ಯಡಿಯೂರಪ್ಪ ಮಾಡುತ್ತಿರುವುದು  ಕೇವಲ ರಾಜಕೀಯ ಗಿಮಿಕ್ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ ಚುನಾವಣಾ ಭರವಸೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ವಿಧಾನಮಂಡಲದ ಅಧಿವೇಶನದ ವೇಳೆ ವಿಧಾನಸಭೆಯ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಭಾನುವಾರ ಘೋಷಿಸಿದ ಯಡಿಯೂರಪ್ಪ, ಜುಲೈ 4 ರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸುವುದಾಗಿ ಭಾನುವಾರ ಹೇಳಿದರು.

Related Stories

No stories found.

Advertisement

X
Kannada Prabha
www.kannadaprabha.com