ಪಕ್ಷದ ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯಗಳಿಲ್ಲ; ಅದು ಲೋಕಸಭೆ ಚುನಾವಣೆಗೆ ತಯಾರಿ ಅಷ್ಟೇ: ನಳಿನ್ ಕುಮಾರ್ ಕಟೀಲು

ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ನಾನು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು ಬಿಜೆಪಿ ಕಾರ್ಯಕರ್ತರ ಮಧ್ಯೆ ಜಗಳ ಭಿನ್ನಾಭಿಪ್ರಾಯಗಳಿಲ್ಲ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಅವರು ಉತ್ಸುಕತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲು
ನಳಿನ್ ಕುಮಾರ್ ಕಟೀಲು
Updated on

ಮಂಗಳೂರು: ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ನಾನು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು ಬಿಜೆಪಿ ಕಾರ್ಯಕರ್ತರ ಮಧ್ಯೆ ಜಗಳ ಭಿನ್ನಾಭಿಪ್ರಾಯಗಳಿಲ್ಲ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಅವರು ಉತ್ಸುಕತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು(Nalin Kumar Kateel) ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕೆಲವು ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಂತವರಿಗೆ ಪಕ್ಷ ನೊಟೀಸ್ ಜಾರಿ ಮಾಡಿ ಪಕ್ಷದ ಶಿಸ್ತನ್ನು ಕಾಪಾಡಿಕೊಂಡು ಹೋಗಬೇಕೆಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ ಎಂದರು.

ಮುಂದಿನ ವರ್ಷದ ಲೋಕಸಭೆ ಚುನಾವಣೆಯನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ. ಎಲ್ಲ ಸದಸ್ಯರು ಪಕ್ಷದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ನಾನೇ ಎಲ್ಲ ಮುಖಂಡರ ಜತೆ ಖುದ್ದು ಮಾತನಾಡಿ ಯಾವುದೇ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದೇನೆ ಎಂದರು. 

ಬೂತ್ ಸಮಿತಿಗಳ ಬಲವರ್ಧನೆಯ ಮಹತ್ವವನ್ನು ಒತ್ತಿ ಹೇಳಿದ ಕಟೀಲ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ತಳಮಟ್ಟದ ಪ್ರಯತ್ನಗಳನ್ನು ಹೆಚ್ಚಿಸಲು ಬೂತ್ ಪ್ರಮುಖರೊಂದಿಗೆ ಸಂವಾದ ನಡೆಸಿದ್ದರು. ಲೋಕಸಭೆ ಚುನಾವಣೆ ತಯಾರಿಯಲ್ಲಿ ಪಕ್ಷದ ನಾಯಕರ ಜವಾಬ್ದಾರಿ ಹೆಚ್ಚಿದೆ ಎಂದು ಒತ್ತಿ ಹೇಳಿದ ಅವರು ತಮ್ಮ ಭಾಷಣದ ಮೇಲೆ ಹಿಡಿತ ಸಾಧಿಸುವಂತೆ ಒತ್ತಾಯಿಸಿದರು.

ಹಿಂದಿನ ಬಿಜೆಪಿ ಸರ್ಕಾರ ಗೋವುಗಳ ರಕ್ಷಣೆಗಾಗಿ ಜಾರಿಗೊಳಿಸಿದ ಕಠಿಣ ಕಾನೂನನ್ನು ಉಲ್ಲೇಖಿಸಿದ ಕಟೀಲ್, ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಮಾತುಗಳನ್ನು ಎಚ್ಚರಿಕೆಯಿಂದ ಆಡಬೇಕು. ಜನರ ಭಾವನೆಗಳನ್ನು ಗೌರವಿಸಬೇಕು, ನಮ್ಮ ದೇಶದಲ್ಲಿ ಜಾನುವಾರುಗಳನ್ನು ಗೌರವಿಸಲಾಗುತ್ತದೆ, ಗೋಹತ್ಯೆ ತಡೆಯಬೇಕು, ಗೋಹತ್ಯೆ ಮತ್ತು ಗೋ ಕಳ್ಳತನದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಹಾತ್ಮ ಗಾಂಧೀಜಿಯವರು ಗೋಸಂರಕ್ಷಣೆಯನ್ನು ಪ್ರತಿಪಾದಿಸುತ್ತಿದ್ದರು ಎಂದರು. 

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆಯ್ಕೆ ಕುರಿತು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್, ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com