ಟಿಕೆಟ್ ಹಂಚಿಕೆ ಗೊಂದಲ: ಮಾರ್ಚ್ 8 ರಂದು ಕಾಂಗ್ರೆಸ್ ಸಭೆ; ಆಕಾಂಕ್ಷಿಗಳ ಮನವೊಲಿಸಲು 'ಕೈ' ಮುಖಂಡರ ಯತ್ನ

2023 ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್‌ ಗೊಂದಲ ಇನ್ನೂ ಮುಂದುವರಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಮಾರ್ಚ್ 8ರಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: 2023 ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್‌ ಗೊಂದಲ ಇನ್ನೂ ಮುಂದುವರಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಮಾರ್ಚ್ 8ರಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ.

ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಲು ಹವಣಿಸುತ್ತಿರುವ ಕೆಪಿಸಿಸಿ ನಾಯಕರು ಕನಿಷ್ಠ 25 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಹರಸಾಹಸ ಪಡುತ್ತಿದ್ದಾರೆ.

ಮಾರ್ಚ್ 8 ರಂದು  ಬೆಂಗಳೂರಿನ ಹೊರವಲಯದ ರೆಸಾರ್ಟ್ ನಲ್ಲಿ ನಡೆಯುವ ಸಭೆಯಲ್ಲಿ ಕರ್ನಾಟಕದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೇವಾಲಾ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಇತರರು ಭಾಗವಹಿಸಲಿದ್ದಾರೆ.

ಬಲ್ಲ ಮೂಲಗಳ ಪ್ರಕಾರ, ನಾಯಕರು ಸ್ಪರ್ಧೆಯಿಂದ ಹೊರಗುಳಿಯಲು ಅಭ್ಯರ್ಥಿಗಳಿಗೆ ಮನವರಿಕೆ ಮಾಡುತ್ತಾರೆ ಮತ್ತು ಪ್ರಬಲ ಮತ್ತು ಗೆಲ್ಲಬಹುದಾದ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಹೋರಾಡಲು ಅವಕಾಶ ಮಾಡಿಕೊಡುತ್ತಾರೆ ಎಂದು ತಿಳಿದು ಬಂದಿದೆ.

ನಾವು ಇತರ ಪಕ್ಷಗಳಿಗಿಂತ ಮುಂಚಿತವಾಗಿಯೇ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ. 150ಕ್ಕೂ ಕಡಿಮೆ ಇಲ್ಲದಂತೆ ಸೀಟು ಗೆಲ್ಲುವ ಗುರಿ ಹೊಂದಿದ್ದೇವೆ. ಕೆಲವು ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳಾಗಿರುವ ಹಾಲಿ ಶಾಸಕರಿದ್ದು, ಈ ಕ್ಷೇತ್ರಗಳಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಬಿಜೆಪಿ ಮತ್ತು ಜೆಡಿಎಸ್‌ನ ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಕ್ಷೇತ್ರಗಳಲ್ಲಿ ನಾವು ಸವಾಲುಗಳನ್ನು ಎದುರಿಸುತ್ತಿದ್ದೇವೆ.

150 ಸೀಟು  ನಾವು ಗಳಿಸಬೇಕಾದರೆ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಬೇಕು, ಅಂಥ ಅಭ್ಯರ್ಥಿಗಳಿಗೆ (ಬೇರೆ ಪಕ್ಷಗಳಿಂದ ಬಂದವರು) ಟಿಕೆಟ್ ಕೊಟ್ಟರೆ ನಮ್ಮ ಸ್ಥಳೀಯ ನಾಯಕರು  ಕೋಪಗೊಳ್ಳುತ್ತಾರೆ ಆಗುತ್ತಾರೆ. ಹೀಗಾಗಿ ಇದು ಸಂಕಷ್ಟದ ಸಮಯವಾಗಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com