ಕರ್ನಾಟಕದಲ್ಲಿ ಭ್ರಷ್ಟಾಚಾರ ಉತ್ತುಂಗದಲ್ಲಿದೆ: ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ

ಬಿಜೆಪಿ ಆಡಳಿತದಲ್ಲಿ ಕರ್ನಾಟಕದಲ್ಲಿ ಭ್ರಷ್ಟಾಚಾರ ಉತ್ತುಂಗಕ್ಕೇರಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಪಕ್ಷ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಹೇಳಿದ್ದಾರೆ. ನೌಕರಿ ಪಡೆಯಲು ಪದವಿ ಬೇಕಿಲ್ಲ, ಸರ್ಕಾರಕ್ಕೆ ಲಂಚ ಕೊಡಲು ಆಸ್ತಿ ಇರಬೇಕು ಎಂಬ ಭಾವನೆಯನ್ನು ಬಿಜೆಪಿ ಜನರಲ್ಲಿ ಬೆಳೆಸುತ್ತಿದೆ ಎಂದು ದೂರಿದರು.
ರಣದೀಪ್ ಸಿಂಗ್ ಸುರ್ಜೇವಾಲಾ
ರಣದೀಪ್ ಸಿಂಗ್ ಸುರ್ಜೇವಾಲಾ

ಉಡುಪಿ: ಬಿಜೆಪಿ ಆಡಳಿತದಲ್ಲಿ ಕರ್ನಾಟಕದಲ್ಲಿ ಭ್ರಷ್ಟಾಚಾರ ಉತ್ತುಂಗಕ್ಕೇರಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಪಕ್ಷ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಹೇಳಿದ್ದಾರೆ. ನೌಕರಿ ಪಡೆಯಲು ಪದವಿ ಬೇಕಿಲ್ಲ, ಸರ್ಕಾರಕ್ಕೆ ಲಂಚ ಕೊಡಲು ಆಸ್ತಿ ಇರಬೇಕು ಎಂಬ ಭಾವನೆಯನ್ನು ಬಿಜೆಪಿ ಜನರಲ್ಲಿ ಬೆಳೆಸುತ್ತಿದೆ ಎಂದು ದೂರಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮೂಗಿನ ನೇರಕ್ಕೆ ಭ್ರಷ್ಟಾಚಾರ ನಡೆಯುತ್ತಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಅವರು, ಬೊಮ್ಮಾಯಿ ಸರ್ಕಾರದಲ್ಲಿನ ಭ್ರಷ್ಟಾಚಾರದ ಪ್ರಮಾಣದ ಬಗ್ಗೆ ಸಂಪೂರ್ಣ ವರದಿ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ಕೋರಿದರು.

ಈ 40 ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ ಭ್ರಷ್ಟಾಚಾರವು ಆವರಿಸಿರುವ ರೀತಿ ಇಡೀ ರಾಜ್ಯವನ್ನೇ ನಾಚಿಸುವಂತೆ ಮಾಡಿದೆ. ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಅಧ್ಯಕ್ಷ ಹಾಗೂ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ 40 ಲಕ್ಷ ರೂಪಾಯಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದನ್ನು ನಾವು ನೋಡಿದ್ದೇವೆ ಎಂದು ದೂರಿದರು.

'ಇದಲ್ಲದೆ, ಅವರ ಕಚೇರಿಯಿಂದ 1.7 ಕೋಟಿ ರೂ.ಗಳನ್ನು ಮತ್ತು 24 ಗಂಟೆಗಳ ಒಳಗೆ ಅವರ ನಿವಾಸದಿಂದ 6 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮೈಸೂರು ಸ್ಯಾಂಡಲ್ ಸೋಪಿನ ಪರಿಮಳವನ್ನೂ ಮಣ್ಣಾಗಿಸಿದೆ' ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com