ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ನನ್ನದೇ: ಮಾಜಿ ಸಿಎಂ ಯಡಿಯೂರಪ್ಪ

ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ನನ್ನದೇ ಹೊರತು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. 
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ

ಬಸವಕಲ್ಯಾಣ: ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ನನ್ನದೇ ಹೊರತು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. 

ಬಸವಕಲ್ಯಾಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ವೀರಶೈವ ಲಿಂಗಾಯತ ಸಮುದಾಯವನ್ನು ದಾರಿ ತಪ್ಪಿಸುವ ಸಲುವಾಗಿ ಕಾಂಗ್ರೆಸ್ ನಾಯಕರು ಇಂತಹ ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ರಾಜ್ಯದಲ್ಲಿ ವ್ಯಾಪಕ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದೇನೆ ಎಂದು ಹೇಳಿದರು. ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದೆ ಎಂದರು.

ಮಾರ್ಚ್ 25 ರಂದು ದಾವಣಗೆರೆಯಲ್ಲಿ ನಾಲ್ಕು ವಿಜಯ ಸಂಕಲ್ಪ ಯಾತ್ರೆಗಳು ಸಮಾವೇಶಗೊಳ್ಳಲಿವೆ ಎಂದ ಅವರು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಗೆ ನೀಡಿದ್ದಾರೆ ಎಂದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಳ್ಳು ಹೇಳುವುದು ಮಾಜಿ ಸಿಎಂ ಸಿದ್ದರಾಮಯ್ಯನವರ ಮನೆ ದೇವರು ಎಂದು ಹೇಳಿದರು. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಪಿಎಲ್ ಕುಟುಂಬಗಳಿಗೆ ಸರ್ಕಾರ 10 ಕೆಜಿ ಉಚಿತ ಅಕ್ಕಿ ನೀಡಿತ್ತು. ಅಕ್ಕಿಯ ಪ್ರಮಾಣವನ್ನು 5 ಕೆಜಿಗೆ ಇಳಿಸಿದವರು ಸಿದ್ದರಾಮಯ್ಯ.ಸಿದ್ದರಾಮಯ್ಯ ಈಗ ಬಿಜೆಪಿಯನ್ನು ದೂಷಿಸುತ್ತಿದ್ದಾರೆ ಎಂದರು.

ಅಂದಿನ ಸಿದ್ದರಾಮಯ್ಯ ಸರ್ಕಾರ ಜನರಿಗೆ ಭಾಗ್ಯಕ್ಕಿಂತ ದುರ್ಭಾಗ್ಯ ನೀಡಿದೆ. ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ನಾಂದಿ ಹಾಡಿದವರು ತಮ್ಮ ಹಿಂದಿನ ಸಿಎಂ ಯಡಿಯೂರಪ್ಪ ಅವರ ಎಂದು ಬೊಮ್ಮಾಯಿ ಶ್ಲಾಘಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com