ಕಡೂರು ಜೆಡಿಎಸ್ ಅಭ್ಯರ್ಥಿ ಘೋಷಣೆ, ಸಿಎಂ ಧನಂಜಯ್ ಗೆ ಟಿಕೆಟ್
ಈ ಹಿಂದೆ ಜೆಡಿಎಸ್ ನಿಂದ ಕಡೂರು ಶಾಸಕರಾಗಿದ್ದ ವೈಎಸ್ ವಿ ದತ್ತ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಕಡೂರಿನಿಂದ ಸಿಎಂ ಧನಂಜಯ್ ಅವರಿಗೆ ಟಿಕೆಟ್ ನೀಡಲಾಗಿದೆ.
Published: 06th March 2023 07:21 PM | Last Updated: 06th March 2023 07:59 PM | A+A A-

ಜೆಡಿಎಸ್
ಹಾಸನ: ಈ ಹಿಂದೆ ಜೆಡಿಎಸ್ ನಿಂದ ಕಡೂರು ಶಾಸಕರಾಗಿದ್ದ ವೈಎಸ್ ವಿ ದತ್ತ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಕಡೂರಿನಿಂದ ಸಿಎಂ ಧನಂಜಯ್ ಅವರಿಗೆ ಟಿಕೆಟ್ ನೀಡಲಾಗಿದೆ.
ಕರ್ನಾಟಕ ರಾಜ್ಯ ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾಗಿರುವ ಸಿಎಂ ಧನಂಜಯ್ ಅವರನ್ನು ಕಡೂರ್ ಜೆಡಿಎಸ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಎಂಎಲ್ಸಿ ಭೋಜೇಗೌಡ ಅವರು ಸೋಮವಾರ ಘೋಷಣೆ ಮಾಡಿದ್ದಾರೆ.
ಇಂದು ಹಾಸನ ಸಂಸದರ ನಿವಾಸದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಕಡೂರು ಜೆಡಿಎಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದ್ದು, ಮಾಜಿ ಸಚಿವ ಎಚ್ಡಿ ರೇವಣ್ಣ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.
ಇದನ್ನು ಓದಿ: ಜೆಡಿಎಸ್ ಮಾಜಿ ಶಾಸಕ ವೈಎಸ್ ವಿ ದತ್ತಾ, ಪಕ್ಷೇತರ ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಕಡೂರು ಕ್ಷೇತ್ರದ ಅಭ್ಯರ್ಥಿ ಬಗ್ಗೆ ಇಂದು ಪ್ರಮುಖರ ಸಭೆ ಕರೆದು ಚರ್ಚೆ ಮಾಡಲಾಗಿದೆ. ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ವರಿಷ್ಠರ ಜೊತೆಗೂ ಚರ್ಚಿಸಲಾಗಿದೆ. ಕುಮಾರಣ್ಣ, ದೇವೇಗೌಡರು, ರಾಜ್ಯ ಅಧ್ಯಕ್ಷರ ಅನುಮತಿ ಪಡೆಯಲಾಗಿದೆ. ಒಮ್ಮತದ ಅಭ್ಯರ್ಥಿಯಾಗಿ ಧನಂಜಯ್ ಅವರ ಹೆಸರನ್ನು ಅಂತಿಮ ಗೊಳಿಸಲಾಗಿದೆ. ಇದಕ್ಕೆ ಎಚ್ಡಿ ಕುಮಾರಸ್ವಾಮಿ ಅವರು ಸಹ ಅನುಮತಿ ಕೊಟ್ಟಿದ್ದಾರೆ ಎಂದರು.