ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲು ಸಾಧ್ಯತೆ?

ತನ್ನ ಪುತ್ರ ಪ್ರಶಾಂತ್ ಲಂಚ ಸ್ವೀಕಾರ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದು, ತಲೆಮರಿಸಿಕೊಂಡಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲಿಸುವ ಸಾಧ್ಯತೆಯಿದೆ. 
ಕೆ.ಮಾಡಾಳ್ ವಿರೂಪಾಕ್ಷಪ್ಪ
ಕೆ.ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು: ತನ್ನ ಪುತ್ರ ಪ್ರಶಾಂತ್ ಲಂಚ ಸ್ವೀಕಾರ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದು, ತಲೆಮರಿಸಿಕೊಂಡಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲಿಸುವ ಸಾಧ್ಯತೆಯಿದೆ. 

ಬೆಂಗಳೂರಿನಲ್ಲಿರುವ ಪ್ರಶಾಂತ್ ನಿವಾಸ ಮತ್ತು ದಾವಣಗೆರೆಯ ಶಾಸಕರ ಮನೆಯಲ್ಲಿ ಶೋಧ ನಡೆಸಿರುವ ಲೋಕಾಯುಕ್ತ ಪೊಲೀಸರಿಗೆ 8 ಕೋಟಿ ರೂ.ಗೂ ಅಧಿಕ ನಗದು, ಚಿನ್ನಾಭರಣ ಹಾಗೂ ಹಲವು ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಇವುಗಳ ಮೌಲ್ಯ ಇನ್ನೂ ಹಲವು ಕೋಟಿ ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ. 

ವಶಪಡಿಸಿಕೊಂಡ ಆಸ್ತಿಯ ಮೌಲ್ಯವು ಶಾಸಕರು ಘೋಷಿಸಿದ ಆದಾಯದ ಮೂಲಗಳಿಗಿಂತ ಹೆಚ್ಚಾಗಿರುವುದರಿಂದ ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅವರ ವಿರುದ್ಧ ಸ್ವಯಂ ಪ್ರೇರಿತ ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಧ್ಯೆ ರಾಜ್. ಸೋಪ್ಸ್ & ಡಿಟರ್ಜೆಂಟ್ಸ್ ಲಿಮಿಟೆಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಶುಕ್ರವಾರದಿಂದ ತಲೆಮರೆಸಿಕೊಂಡಿರುವ ಶಾಸಕರ ಪತ್ತೆಗೆ ಏಳು ತಂಡಗಳನ್ನು ರಚಿಸಲಾಗಿದೆ. ಪೊಲೀಸ್ ತಂಡಗಳು ಅವರ ಹುಡುಕಾಟದಲ್ಲಿದ್ದು, ಹಲವು ಸ್ಥಳಗಳಿಗೆ ಭೇಟಿ ನೀಡಿವೆ. ರಾಜ್ಯ, ಅಲ್ಲದೇ ದೇಶದಿಂದ ಹೊರ ಹೋಗದಂತೆ ಖಚಿತಪಡಿಸಿಕೊಳ್ಳಲು, ವಿಮಾನ ನಿಲ್ದಾಣಗಳಲ್ಲಿ ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ತನಿಖೆಯ ಭಾಗವಾಗಿ, ಲೋಕಾಯುಕ್ತ ಪೊಲೀಸರು ಶಾಸಕರ ಪುತ್ರ ಮಲ್ಲಿಕಾರ್ಜುನ್ ಮಾಡಲ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ಅವರು ಪಾಲುದಾರರಾಗಿರುವ ಕಂಪನಿಯ ಬ್ಯಾಂಕ್ ಖಾತೆಗೆ ಕಳೆದ ವಾರದ ಆರಂಭದಲ್ಲಿ ಲಕ್ಷಾಂತರ ರೂಪಾಯಿ ಜಮಾ ಆಗಿರುವುದು ಬಹಿರಂಗವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com