ಜೆಡಿಎಸ್ ಸೇರುವುದಕ್ಕೂ ಮುನ್ನವೇ ಸ್ವಗ್ರಾಮದಿಂದ ಎ ಮಂಜು ಪ್ರಚಾರ ಆರಂಭ

ಮಾಜಿ ಸಚಿವ ಎ ಮಂಜು ಜೆಡಿಎಸ್ ಟಿಕೆಟ್ ಮೇಲೆ ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಜೆಡಿಎಸ್ ಸೇರುವುದಕ್ಕೂ ಮುನ್ನ ಹನ್ಯಾಲು ಗ್ರಾಮದಿಂದ ಪ್ರಚಾರ ಆರಂಭಿಸಿದ್ದಾರೆ. 
ಎ ಮಂಜು
ಎ ಮಂಜು

ಹಾಸನ: ಮಾಜಿ ಸಚಿವ ಎ ಮಂಜು ಜೆಡಿಎಸ್ ಟಿಕೆಟ್ ಮೇಲೆ ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಜೆಡಿಎಸ್ ಸೇರುವುದಕ್ಕೂ ಮುನ್ನ ಹನ್ಯಾಲು ಗ್ರಾಮದಿಂದ ಪ್ರಚಾರ ಆರಂಭಿಸಿದ್ದಾರೆ. 

ಪ್ರಚಾರಕ್ಕೂ ಮುನ್ನ ಅನುಯಾಯಿಗಳು, ಹಿರಿಯ ನಾಗರಿಕರು, ಗ್ರಾಮಸ್ಥರೊಂದಿಗೆ ಎ ಮಂಜು ಸಭೆ ನಡೆಸಿದ್ದು, ಈ ಸಭೆಯಲ್ಲಿ ಭಾಗಿಯಾಗಿದ್ದವರು ಮಾಜಿ ಸಚಿವರನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ. 

ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಎ ಮಂಜು, 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮರೆತು ಪಕ್ಷವನ್ನು ಬಲಪಡಿಸುವಂತೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರೇವಣ್ಣ, ಎ ಮಂಜುಗೆ ಕರೆ ನೀಡಿದ್ದು ಮಂಜು ಜೆಡಿಎಸ್ ನಾಯಕ ಹೆಚ್ ಡಿ ದೇವೇಗೌಡ ಅವರ ಆಶೀರ್ವಾದ ಪಡೆದಿದ್ದಾರೆ.

ಇದನ್ನೂ ಓದಿ: ನಾನು ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿ: ಎ.ಮಂಜು
 
ತವರು ಜಿಲ್ಲೆಯಲ್ಲಿ ಪಕ್ಷದ ಸ್ಥಾನಗಳನ್ನು ಉಳಿಸಿಕೊಳ್ಳುವುದಕ್ಕೆ ಹೆಚ್ ಡಿ ರೇವಣ್ಣ, ಕುಮಾರಸ್ವಾಮಿ, ಎ ಮಂಜು ಕಾರ್ಯತಂತ್ರಗಳನ್ನು ಚರ್ಚಿಸಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ನಿರ್ದೇಶನದ ನಂತರ ಎ ಮಂಜು ಪ್ರಚಾರ ಆರಂಭಿಸಿದ್ದು, ಜೆಡಿಎಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. 

ಮಂಜು ಬೇಷರತ್ತಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅರಕಲಗೂಡಿನಲ್ಲಿ ಬೃಹತ್ ಸಮಾವೇಶ ನಡೆಸುವ ಯೋಜನೆ ಹೊಂದಿದ್ದಾರೆ, ಹಾಗೂ ಈ ಸಮಾವೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಹಲವು ಕಾರ್ಯಕರ್ತರು ಜೆಡಿಎಸ್ ಸೇರುವ ಸಾಧ್ಯತೆ ಇದೆ ಮಾ.12 ರಂದು ದೇವೇಗೌಡರ ನಿವಾಸದಲ್ಲಿ ಎ ಮಂಜು ಜೆಡಿಎಸ್ ಸೇರ್ಪಡೆಯಾಗಲಿದ್ದು, ಮಾ.16 ರಂದು ಅರಕಲಗೂಡು ತಲುಪುವ ಪಾದಯಾತ್ರೆಯನ್ನು ಮುನ್ನಡೆಸಲಿದ್ದಾರೆ. 15 ದಿನಗಳ ಹಿಂದೆ ಕುಮಾರಸ್ವಾಮಿ ಅರಕಲಗೂಡು ಕ್ಷೇತ್ರದ ಜೆಡಿಎಸ್ ಟಿಕೆಟ್ ನ್ನು ಎ ಮಂಜು ಅವರಿಗೆ ಘೋಷಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com