ರಾಜ್ಯದೆಲ್ಲೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸಿಎಂ ಬೊಮ್ಮಾಯಿ ವಸೂಲಿ ಕೆಲಸ ಶುರು ಮಾಡಿದ್ದಾರೆ: ಡಿಕೆ ಶಿವಕುಮಾರ್

ಬಿಜೆಪಿ ಸರ್ಕಾರದ ಅವಧಿ ಮುಗಿಯುತ್ತಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಎಲ್ಲ ಇಲಾಖೆಗಳಿಂದ ಹಣ ವಸೂಲಿ ಮಾಡುವ ಕೆಲಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿರತರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೋಮವಾರ ಆರೋಪಿಸಿದರು.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಳಗಾವಿ: ಬಿಜೆಪಿ ಸರ್ಕಾರದ ಅವಧಿ ಮುಗಿಯುತ್ತಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಎಲ್ಲ ಇಲಾಖೆಗಳಿಂದ ಹಣ ವಸೂಲಿ ಮಾಡುವ ಕೆಲಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿರತರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೋಮವಾರ ಆರೋಪಿಸಿದರು.

ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರ ಸರ್ಕಾರದಲ್ಲಿ ರಾಜ್ಯದೆಲ್ಲೆಡೆ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಆರೋಪಿಸಿದರು.

ಚುನಾವಣೆ ಹತ್ತಿರವಾಗುತ್ತಿರುವುದರಿಂದ ಮುಖ್ಯಮಂತ್ರಿ ಅಲ್ಪಾವಧಿಯ ಟೆಂಡರ್ ಮತ್ತು ಕಾರ್ಯಾದೇಶಗಳನ್ನು ಪಾಸ್ ಮಾಡುವ ಮೂಲಕ ವಸೂಲಿ ಕೆಲಸ ಶುರುಮಾಡಿದ್ದಾರೆ. ತಾಲ್ಲೂಕು ಮತ್ತು ಎಲ್ಲಾಮಟ್ಟದ ಅಧಿಕಾರಿಗಳ ಒತ್ತಡ ಹೇರಲಾಗುತ್ತಿದೆ, ಅಧಿಕಾರಿಗಳು ತಮ್ಮಲ್ಲಿಗೆ ಬಂದು ದೂರುಗಳನ್ನು ಹೇಳಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಸರಿಸಾಟಿ ನಾಯಕರು ಕಾಂಗ್ರೆಸ್'ನಲ್ಲಿ ಇಲ್ಲ: ಬಿಎಸ್ ಯಡಿಯೂರಪ್ಪ
 
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ನೀರಾವರಿ, ಪಿಡಬ್ಲ್ಯುಡಿಗೆ ಮಧ್ಯಂತರ ಟೆಂಡರ್ ಕರೆದಿದೆ. ಕಾಮಗಾರಿಗಳು ಮತ್ತು ಗುತ್ತಿಗೆದಾರರಿಗೆ ಮುಂಗಡವಾಗಿ ಹಣ ಬಿಡುಗಡೆ ಮಾಡುವ ಮೂಲಕ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದು, ಶೀಘ್ರ ಹಣ ಗಳಿಸುವ ಹೊಸ ತಂತ್ರವನ್ನು ರೂಪಿಸಿದೆ. ಪ್ರತಿ ಇಲಾಖೆಯ ಮೇಲೆ ನಿಗಾ ಇಡಲಾಗುತ್ತಿದ್ದು, ವಿದ್ಯುತ್ ಇಲಾಖೆಯಲ್ಲಿ ಟೆಂಡರ್ ಕರೆಯದೆ ಕಾಮಗಾರಿಗಳು ನಡೆಯುತ್ತಿವೆ, ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಹಣ ಮಾಡಲಾಗದ ಕಾರಣ ಕಾಂಗ್ರೆಸ್, ಜೆಡಿಎಸ್ ಮುಖಂಡರ ಮನೆ ಮೇಲೆ ದಾಳಿ ನಡೆಸುವಂತೆ ಲೋಕಾಯುಕ್ತಕ್ಕೆ ಸೂಚಿಸಿದ್ದಾರೆ ಎಂದು ಆರೋಪಿಸಿದರು.

ಬೆಳಗಾವಿಯ ನೀರಾವರಿ ಕಚೇರಿಗೆ ಕೋಟಿಗಟ್ಟಲೆ ಹಣ ನೀಡಲು ಯೋಜನೆ ಸಿದ್ಧಪಡಿಸಲಾಗಿದೆ, ಅದಾಗಬೇಕೆಂದೇ ನಾವೂ ಕಾಯುತ್ತಿದ್ದೇವೆ. ನಂತರ ಸಾರ್ವಜನಿಕರ ಮುಂದೆ ಈ ಭ್ರಷ್ಟಾಚಾರಗಳನ್ನು ಬಹಿರಂಗಪಡಿಸುತ್ತೇವೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com