ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಆರೋಪಿಸಿದರು.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಆರೋಪಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೂಪಾಕ್ಷಪ್ಪ ಅವರು ಮನೆಯಲ್ಲಿದ್ದು, ಪೊಲೀಸರು ಅವರನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಮತ್ತು ಸಾರ್ವಜನಿಕರನ್ನು ದಾರಿ ತಪ್ಪಿಸುವ ಸಲುವಾಗಿ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದಾರೆಂದು ಹೇಳಿದರು.

"ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ಲಿಮಿಟೆಡ್‌ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಲು ಬಂದಾಗ ಆಗೇಕೆ ಪೊಲೀಸರು ಅವರನ್ನು ಬಂಧಿಸಲಿಲ್ಲ? ಕಳಂಕಿತ ಶಾಸಕರು ಎಲ್ಲಿದ್ದಾರೆ ಎಂದು ಸರ್ಕಾರಕ್ಕೆ ಚೆನ್ನಾಗಿಯೇ ತಿಳಿದಿದೆ ಎಂದು ತಿಳಿಸಿದರು.

ಬಿಜೆಪಿ ಶಾಸಕ ಮತ್ತು ಅವರ ಪುತ್ರನ ಮೇಲೆ ನಡೆದ ದಾಳಿಯ ನಂತರ ಕಾಂಗ್ರೆಸ್ ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಸಾಕ್ಷ್ಯಾಧಾರಗಳನ್ನು ಹುಡುಕುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪುರಾವೆಗಳು ಸಿಕ್ಕಿವೆ. ಕೆಎಸ್‌ಡಿಎಲ್‌ ಅಧ್ಯಕ್ಷರಾಗಿದ್ದ ವಿರೂಪಾಕ್ಷಪ್ಪ ಅವರು, ತಮ್ಮ ಪುತ್ರನ ಮೂಲಕ ಲಂಚ ಪಡೆಯುತ್ತಿದ್ದರು. ಕೂಡಲೇ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

 ನಮ್ಮ ಸರ್ಕಾರ ಇದ್ದಾಗ ಲೋಕಾಯುಕ್ತವನ್ನು ಬಂದ್ ಮಾಡಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೇ ಇವತ್ತೇ ರಾಜೀನಾಮೆ ಕೊಡುತ್ತೇನೆ. ನಾವು ಭ್ರಷ್ಟಾಚಾರ ನಿಗ್ರಹಕ್ಕಾಗಿ ಎಸಿಬಿ ರಚನೆ ಮಾಡಿದ್ದೇ ಅಷ್ಟೇ. ಲೋಕಾಯುಕ್ತದ ಯಾವ ಅಧಿಕಾರವನ್ನು ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತರು ಇದ್ದರು. ಎಲ್ಲಾ ಸತ್ಯ ಗೊತ್ತಿದ್ದರೂ ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ. ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ. ನ್ಯಾಯಾಲಯ ರದ್ದು ಮಾಡಿದೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ‌ ಆಗಿದೆ. ಸುಳ್ಳೇ ಬಿಜೆಪಿ ಮನೆ ದೇವರು. ಹೀಗಾಗಿ, ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆಂದು. ಅದೇ ರೀತಿ ಅಭಿವೃದ್ಧಿ ವಿಚಾರದಲ್ಲಿಯೂ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಹರಿಹಾಯ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com