ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ ಬಾಂಬ್!

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ  ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ವಿಜಯಪುರ: ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ  ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ವಿಜಯಪುರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಥಣಿ ಕ್ಷೇತ್ರದಿಂದ ಮಹೇಶ ಕುಮಟಳ್ಳಿ  ಟಿಕೆಟ್ ನೀಡಲೇಬೇಕು ಎಂದು ಪರೋಕ್ಷವಾಗಿ ಕೇಸರಿ ವರಿಷ್ಠರಿಗೆ ಸಂದೇಶ ರವಾನಿಸಿದ ರಮೇಶ ಜಾರಕಿಹೊಳಿ, ಬಿಜೆಪಿ ಸರ್ಕಾರ ಸ್ಥಾಪನೆಗಾಗಿ ಸಚಿವ ಸ್ಥಾನ ತ್ಯಾಗ ಮಾಡಿ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೇನೆ. ಹೀಗಾಗಿ ಸಚಿವ ಸ್ಥಾನದ ಆಸೆಗಾಗಿ ಬಿಜೆಪಿ ಪಕ್ಷಕ್ಕೆ ಬಂದಿಲ್ಲ ಎಂದರು.

ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತ ಒಪ್ಪಿ, ಇದ್ದ ಅಧಿಕಾರ ತೊರೆದು ಬಂದವನು ನಾನು ಎಂದರು. ಬೆಳಗಾವಿಯಲ್ಲಿ ಶಿವಾಜಿ ಮೂರ್ತಿಯನ್ನು ಎರಡು ಬಾರಿ ಉದ್ಘಾಟನೆ ಮಾಡಿದ ಬೆಳವಣಿಗೆ ಬಗ್ಗೆ ಮಾತನಾಡಿ, ಈ ಬಗ್ಗೆ ನನ್ನನ್ನು ಕೇಳಬೇಡಿ, ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿ ಎಂದರು.

ನಾನು ಶಿಷ್ಟಾಚಾರ ಹಾಗೂ ನಿಯಮದಂತೆ ಮುಖ್ಯಮಂತ್ರಿ ಅವರನ್ನು ಕರೆದುಕೊಂಡು ಕಾರ್ಯಕ್ರಮ ಮಾಡಿದ್ದೇನೆ. ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಶಿವಾಜಿ ಮೂರ್ತಿ ಲೋಕಾರ್ಪಣೆ ಮಾಡಲಾಗಿದೆ. ಈ ಕುರಿತು ವಿಜಯಪುರದಲ್ಲೇ ಇರುವ ಎಂ.ಬಿ. ಪಾಟೀಲ ಅವರನ್ನು ಕೇಳಿ ಎಂದು‌ ಹೇಳಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸ್ಥಾನ ಗಳಿಸಲು ಮುಂದಾಗುತ್ತೇವೆ. ಹಾಲಿ 13 ಬಿಜೆಪಿ ಸ್ಥಾನಗಳು ಮಾತ್ರವಲ್ಲದೇ ಇನ್ನೂ ಹೆಚ್ಚು ಕ್ಷೇತ್ರಗಳಲ್ಲಿ ನಾವು ವಿಜಯ ಸಾಧಿಸುತ್ತೇವೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ನಾರಾಯಣಗೌಡ ಬಿಜೆಪಿ ತೊರೆದು, ಕಾಂಗ್ರೆಸ್ ಸೇರುವುದಾಗಿ ಎಲ್ಲೂ ಹೇಳಿಲ್ಲ. ಈ ಕುರಿತ ವರದಿಗಳ‌ ಕುರಿತು ನಾನು ಅವರೊಂದಿಗೆ ಕುರಿತು ಮಾತನಾಡುತ್ತೇನೆ ಎಂದರು.

ಇಷ್ಟಕ್ಕೂ ಮುಳುಗುವ ಹಡಗಿನಂತಿರುವ ಕಾಂಗ್ರೆಸ್ ಪಕ್ಷವನ್ನು ಯಾರೂ ಸೇರಲಾರರು. ಹಡಗು ಮುಳುಗುವಾಗ ಅಲ್ಲಿ ಹೋಗುವುದು ಒಳ್ಳೆಯದಲ್ಲ. ಬಿಜೆಪಿ ಪಕ್ಷ ದೇಶದಲ್ಲಿ ಹೆಮ್ಮರವಾಗಿ ಬೆಳೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಪಕ್ಷವನ್ನು ಹೊಗಳುವಾಗ ಹಾಗೂ ಮುಳುಗುವ ಹಡಗು ಎನಿಸಿರು ಕಾಂಗ್ರೆಸ್ ಪಕ್ಷ ಸೇರುವ ಹುಂಬತನ ಮಾಡಬಾರದೆಂದು ಮನವಿ ಮಾಡಿದರು.

ಇನ್ನು ಸಚಿವ ಸ್ಥಾನ ಕೊಡದೇ ಇದ್ದುದ್ದಕ್ಕೆ ರಮೇಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನ ಸಿಗದೆ ಇರೋದಕ್ಕೆ ನಿರಾಶೆ ಇಲ್ಲ. ನಾನು ಇದ್ದ ಸಚಿವ ಸ್ಥಾನ ಬಿಟ್ಟು ಬಿಜೆಪಿಗೆ ಬಂದಿದ್ದೇನೆ. ಬಿಜೆಪಿ ತತ್ವ ಸಿದ್ದಾಂತ ನಂಬಿ ಬಂದಿದ್ದೇನೆ ಹೊರತು ಸಚಿವ ಸ್ಥಾನಕ್ಕಾಗಿ ಬಂದಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com