ಲಂಡನ್ ನಲ್ಲಿ ರಾಹುಲ್ ಗಾಂಧಿಯಿಂದ ಬಸವೇಶ್ವರ, ಕರ್ನಾಟಕ ಜನತೆಗೆ ಅಪಮಾನ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ  ಭಾನುವಾರ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ದೇಶದ ಪ್ರಜಾಪ್ರಭುತ್ವದ ಕುರಿತು ಮಾತನಾಡಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಶ್ವದ ಯಾವುದೇ ಶಕ್ತಿಯು ಭಾರತದ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ಧಾರವಾಡ: ಪ್ರಧಾನಿ ನರೇಂದ್ರ ಮೋದಿ  ಭಾನುವಾರ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ದೇಶದ ಪ್ರಜಾಪ್ರಭುತ್ವದ ಕುರಿತು ಮಾತನಾಡಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಶ್ವದ ಯಾವುದೇ ಶಕ್ತಿಯು ಭಾರತದ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದು ಹೇಳಿದರು.

ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ 'ಕ್ರೂರ ದಾಳಿ'ಗೆ ಒಳಗಾಗಿವೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಇಂತಹ ಹೇಳಿಕೆ  12 ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರ, ಕರ್ನಾಟಕದ ಜನರು, ಭಾರತದ ಶ್ರೇಷ್ಠ ಸಂಪ್ರದಾಯಗಳು ಮತ್ತು ಅದರ ನಾಗರಿಕರಿಗೆ ಮಾಡಿದ ಅವಮಾನ ಎಂದು ಮೋದಿ ಹೇಳಿದರು. 

ಕರ್ನಾಟಕದಲ್ಲಿ ಬಸವೇಶ್ವರರನ್ನು ಹೆಚ್ಚಾಗಿ ಆರಾಧಿಸಲಾಗುತ್ತದೆ. ವಿಶೇಷವಾಗಿ  ಆಡಳಿತಾರೂಢ ಬಿಜೆಪಿಯ ಪ್ರಮುಖ ಮತ ಬ್ಯಾಂಕ್ ಆಗಿರುವ ಲಿಂಗಾಯತ ಸಮುದಾಯ ರಾಜ್ಯದಲ್ಲಿ ಹೆಚ್ಚಾಗಿ ಬಸವೇಶ್ವರರ ಆರಾಧಕರಾಗಿರುವುದರಿಂದ ಪ್ರಧಾನಿ ಹೇಳಿಕೆಯನ್ನು ರಾಜಕೀಯ ಪ್ರಾಮುಖ್ಯತೆಯೊಂದಿಗೆ ನೋಡಲಾಗುತ್ತಿದೆ. ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪ್ರಧಾನಿ ಮೋದಿ ಈ ವರ್ಷ ಆರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ್ದಾರೆ.

'ಬಸವೇಶ್ವರರ ನಾಡಿಗೆ ನಾನು ಬಂದಿದ್ದು, ಅವರ ಆಶೀರ್ವಾದ ಸಿಕ್ಕಂತೆ ಭಾಸವಾಗುತ್ತಿದೆ. ಬಸವೇಶ್ವರರ ಕೊಡುಗೆಗಳಲ್ಲಿ, ಅನುಭವ ಮಂಟಪದ ಸ್ಥಾಪನೆಯು ಅತ್ಯಂತ ಮುಖ್ಯವಾಗಿದೆ, ಈ ಪ್ರಜಾಪ್ರಭುತ್ವ ವ್ಯವಸ್ಥೆಯು ಪ್ರಪಂಚದಾದ್ಯಂತ ಸಂಶೋಧನೆಯಾಗಿದೆ ಮತ್ತು ಅಂತಹ ಹಲವಾರು ವಿಷಯಗಳಿವೆ. ಭಾರತವು ಕೇವಲ ಅತಿದೊಡ್ಡ ಪ್ರಜಾಪ್ರಭುತ್ವವಲ್ಲ, ಅದು ಪ್ರಜಾಪ್ರಭುತ್ವದ ತಾಯಿ ಎಂದರು. 

ನೂತನ ಐಐಟಿ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿದ ಮೋದಿ, ಕೆಲವು ವರ್ಷಗಳ ಹಿಂದೆ ಲಂಡನ್‌ನಲ್ಲಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸುವ ಸೌಭಾಗ್ಯ ನನಗೆ  ಸಿಕ್ಕಿತ್ತು. ಆದರೆ ಅದೇ ಲಂಡನ್‌ನಲ್ಲಿ ಭಾರತದ ಪ್ರಜಾಪ್ರಭುತ್ವದ ಮೇಲೆ ಪ್ರಶ್ನೆಗಳು ಎದ್ದಿರುವುದು ದುರದೃಷ್ಟಕರ. ಭಾರತದ ಪ್ರಜಾಪ್ರಭುತ್ವದ ಬೇರುಗಳು ನಮ್ಮ ಶತಮಾನಗಳ ಇತಿಹಾಸದಿಂದ ಪೋಷಿಸಲ್ಪಟ್ಟಿವೆ, ಈ ಜಗತ್ತಿನಲ್ಲಿ ಯಾವುದೇ ಶಕ್ತಿಯು ಭಾರತದ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಹಾನಿ ಮಾಡಲಾರದು. ಇದರ ಹೊರತಾಗಿಯೂ ಕೆಲವರು ಅದನ್ನು ದಡದಲ್ಲಿ ನಿಲ್ಲುವಂತೆ ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದರು. 

ಇಂತಹವರು  ಬಸವೇಶ್ವರರು, ಕರ್ನಾಟಕದ ಜನತೆ, ಭಾರತದ ಶ್ರೇಷ್ಠ ಸಂಪ್ರದಾಯಗಳು, ದೇಶದ 130 ಕೋಟಿ ಪ್ರಜ್ಞಾವಂತ ನಾಗರಿಕರನ್ನು ಅವಮಾನಿಸುತ್ತಿದ್ದಾರೆ ಎಂದ ಅವರು, 'ಕರ್ನಾಟಕದ ಜನತೆ ಇಂತಹವರ ಬಗ್ಗೆ ಎಚ್ಚರಿಕೆ ವಹಿಸಬೇಕು' ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com