ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಎರಡೂ ಬದಿಯಲ್ಲಿ ಬೃಹತ್ ಹೋರ್ಡಿಂಗ್ಸ್‌ ಹಾಕುವಲ್ಲಿ ಕಾಂಗ್ರೆಸ್ ನಿರತ!

118 ಕಿಲೋಮೀಟರ್ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ ಮಾಡಿ ಪ್ರಧಾನಿ ನರೇಂದ್ರ ಮೋದಿ ವಾಪಸ್ಸಾದ ನಂತರ, ಎಕ್ಸ್‌ಪ್ರೆಸ್‌ವೇಯ ಎರಡೂ ಬದಿಯಲ್ಲಿ ಬೃಹತ್ ಹೋರ್ಡಿಂಗ್‌ಗಳನ್ನು ಹಾಕುವ ಮೂಲಕ ಕಾಂಗ್ರೆಸ್ ಅದನ್ನು ಹೆಚ್ಚು ಬಳಸಿಕೊಳ್ಳುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 118 ಕಿಲೋಮೀಟರ್ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ ಮಾಡಿ ಪ್ರಧಾನಿ ನರೇಂದ್ರ ಮೋದಿ ವಾಪಸ್ಸಾದ ನಂತರ, ಎಕ್ಸ್‌ಪ್ರೆಸ್‌ವೇಯ ಎರಡೂ ಬದಿಯಲ್ಲಿ ಬೃಹತ್ ಹೋರ್ಡಿಂಗ್‌ಗಳನ್ನು ಹಾಕುವ ಮೂಲಕ ಕಾಂಗ್ರೆಸ್ ಅದನ್ನು ಹೆಚ್ಚು ಬಳಸಿಕೊಳ್ಳುತ್ತಿದೆ.

ಗೃಹಲಕ್ಷ್ಮಿ, ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಸೇರಿದಂತೆ ಕಾಂಗ್ರೆಸ್ ಚುನಾವಣಾ ಪೂರ್ವ ಭರವಸೆಗೆಳ ಬಗ್ಗೆ ಪ್ರಯಾಣಿಕರಿಗೆ ಅರಿವು ಮೂಡಿಸಲು ಈ ಹೋರ್ಡಿಂಗ್‌ಗಳನ್ನು ಹಾಕಲಾಗಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈಗಾಗಲೇ ಪ್ರತಿ ಕ್ಷೇತ್ರದ ಪ್ರತಿ ಮನೆ ಮನೆಗೆ ತೆರಳಿ ಕರಪತ್ರಗಳನ್ನು ವಿತರಿಸುತ್ತಿದ್ದಾರೆ ಮತ್ತು ಅವರ ನಾಯಕರು ವಿವಿಧ ರ‍್ಯಾಲಿಗಳಲ್ಲಿ ತಮ್ಮ ಭರವಸೆಗಳನ್ನು ಪುನರುಚ್ಚರಿಸುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಈ ಹೋರ್ಡಿಂಗ್‌ಗಳು ಮತ್ತು ಕರಪತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಏಕೆಂದರೆ, ಪಕ್ಷವು ಈಗಾಗಲೇ ಕೆಲವು ಸ್ಥಳಗಳಲ್ಲಿ ಫಲಾನುಭವಿಗಳಿಗೆ ವಿತರಿಸಿದ ‘ಚೆಕ್‌’ಗಳಿಗೆ ಅವರು ಸಹಿ ಹಾಕಿದ್ದಾರೆ. ಖಾಸಗಿ ಏಜೆನ್ಸಿಯೊಂದಕ್ಕೆ 8,000 ಚದರ ಅಡಿ ವಿಸ್ತೀರ್ಣದ 15 ಹೋರ್ಡಿಂಗ್‌ಗಳನ್ನು ನಿರ್ಮಿಸುವ ಕಾರ್ಯವನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೆದ್ದಾರಿಗಳ ಉದ್ದಕ್ಕೂ ಸಾವಿರಕ್ಕೂ ಹೆಚ್ಚು ಹೋರ್ಡಿಂಗ್‌ಗಳನ್ನು ಹಾಕಲಾಗುವುದು ಎನ್ನಲಾಗಿದೆ.

ಕೆಪಿಸಿಸಿ ಎಷ್ಟು ಖರ್ಚು ಮಾಡಿದೆ ಎಂದು ಕೇಳಿದ ಪ್ರಶ್ನೆಗೆ, ಪ್ರಚಾರ ವ್ಯವಸ್ಥಾಪಕರು ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು. ಆದರೆ, ಈ ಹೋರ್ಡಿಂಗ್‌ಗಳು 2024ರ ಲೋಕಸಭೆ ಚುನಾವಣೆಯವರೆಗೆ ಇರುತ್ತವೆ ಎಂದು ನಾಯಕರೊಬ್ಬರು ಹೇಳಿದರು. ಚುನಾವಣಾ ಪೂರ್ವ ಸಮೀಕ್ಷೆಯೊಂದು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಲವನ್ನು ನೀಡಿದೆ ಮತ್ತು ಮೂರು ಚುನಾವಣಾ ಪೂರ್ವ ಗ್ಯಾರಂಟಿಗಳಿಂದ ಶೇಕಡಾವಾರು ಮತ ಹೆಚ್ಚಳಕ್ಕೆ ಕಾರಣವಾಗಿದೆ. ಪಕ್ಷವು ಶೀಘ್ರದಲ್ಲೇ ಇನ್ನೆರಡು ಉಚಿತಗಳನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ತಂತ್ರಜ್ಞರೊಬ್ಬರು ತಿಳಿಸಿದ್ದಾರೆ.

ಎಕ್ಸ್‌ಪ್ರೆಸ್‌ವೇಯಲ್ಲಿ ಸುಮಾರು 500 ಹೋರ್ಡಿಂಗ್‌ಗಳನ್ನು ಹಾಕಲು ಯೋಜಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಕೆ ಮುಳಗುಂದ ಟಿಎನ್ಐಇಗೆ ತಿಳಿಸಿದ್ದಾರೆ. ನಾವು ನಮ್ಮ ಭರವಸೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಮತ್ತು ನಾವು ಅಧಿಕಾರಕ್ಕೆ ಬಂದಾಗ ಅವುಗಳನ್ನು ಈಡೇರಿಸಲು ಬದ್ಧರಾಗಿದ್ದೇವೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com