ರಾಜ್ಯ ರಾಜಕಾರಣಕ್ಕೆ ಡಿ.ಕೆ ಸುರೇಶ್? ಎಚ್.ಡಿ. ದೇವೇಗೌಡ ಕುಟುಂಬದ ಭದ್ರಕೋಟೆ ರಾಮನಗರದಲ್ಲಿ ನಿಖಿಲ್ ವಿರುದ್ಧ ಸ್ಪರ್ಧೆ?

ರಾಮನಗರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಡಿಕೆ ಸುರೇಶ್ ಸ್ಪರ್ಧಿಸಲಿದ್ದಾರೆಯೇ? ಎಂಬ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಡಿ.ಕೆ ಸುರೇಶ್
ಡಿ.ಕೆ ಸುರೇಶ್

ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಡಿಕೆ ಸುರೇಶ್ ಸ್ಪರ್ಧಿಸಲಿದ್ದಾರೆಯೇ? ಎಂಬ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಕ್ಷೇತ್ರದಿಂದ ಜನರಿಂದ ಪ್ರಸ್ತಾಪಗಳು ಬಂದಿವೆ ಆದರೆ ಇದುವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಪಕ್ಷದ ಹೈಕಮಾಂಡ್ ಮತ್ತು ರಾಜ್ಯದ  ಹಿರಿಯ ನಾಯಕರ ಜೊತೆ ಚರ್ಚಿಸಿ ಸುರೇಶ್ ಕಣಕ್ಕಿಳಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಭದ್ರಕೋಟೆ 'ರಾಮನಗರ' ಭೇದಿಸುವ ಸವಾಲಿಗೆ  ಕಾಂಗ್ರೆಸ್‌ ಅಣಿಯಾಗಿದೆ. ಡಿ.ಕೆ.ಶಿವಕುಮಾರ್ ಅವರ ಸಹೋದರ ಹಾಗೂ ಸಂಸದ ಡಿ.ಕೆ. ಸುರೇಶ್‌ ಅವರನ್ನೇ ಈ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ ಎಂದು ತಿಳಿದು ಬಂದಿದೆ.

ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ನಡುವಿನ ಬಲಾಬಲ ಪರೀಕ್ಷೆಗೆ ರಾಮನಗರ ವಿಧಾನಸಭಾ ಕ್ಷೇತ್ರ ಸಾಕ್ಷಿಯಾಗುವ ಸಾಧ್ಯತೆ ನಿಚ್ಚಳವಾಗಿದೆ. 

ಎಚ್‌.ಡಿ. ದೇವೇಗೌಡ ಅವರಿಗೆ ರಾಜಕೀಯ ಮರುಜನ್ಮ ನೀಡಿದ ಕ್ಷೇತ್ರವೆಂದೇ ಹೆಸರಾದ ರಾಮನಗರದಲ್ಲಿ ಈ ಬಾರಿ ಗೌಡರ ಮೊಮ್ಮಗ ನಿಖಿಲ್‌ ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್‌ ಮಧ್ಯೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆಯಿದೆ. ಪರೋಕ್ಷವಾಗಿ ಇದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್‌ ನಡುವಿನ ಹೋರಾಟಕ್ಕೆ ವೇದಿಕೆಯಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com