
ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಕರ್ನಾಟಕದಲ್ಲಿ ಮೋದಿ ಸುನಾಮಿ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಭಾರತದ ಮಹಾನ್ ನಾಯಕ, ಅತ್ಯಂತ ಕಷ್ಟ ಕಾಲದಲ್ಲಿ ಭಾರತವನ್ನು ಎತ್ತಿಹಿಡಿದು, ಭಾರತದ ಗಡಿ ರಕ್ಷಣೆ ಮಾಡಿ ಆಂತರಿಕ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ. ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸಿ ಕೋವಿಡ್ ಸಂದರ್ಭದಲ್ಲಿ ಬಡವರ ಕೈಹಿಡಿದಿದ್ದಾರೆ ಎಂದು ಹೇಳಿದರು.
ವಸತಿ ಸಚಿವ ವಿ.ಸೋಮಣ್ಣ ಅವರ ಕುರಿತು ಮಾತನಾಡಿ, ಸೋಮಣ್ಣ ಮತ್ತು ನಾನು ಬಹಳ ಹಳೆಯ ಸ್ನೇಹಿತರು. ನಿನ್ನೆ ಹುಬ್ಬಳ್ಳಿಯಲ್ಲಿ ಔಪಚಾರಿಕವಾಗಿ ಭೇಟಿ ಆಗಿದ್ದಷ್ಟೇ. ನಮ್ಮ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ವಿ.ಸೋಮಣ್ಣ ಜತೆಗೇ ಇದ್ದಾರೆ. ಮುಂದೆಯೂ ಇರ್ತಾರೆ. ಕೆಪಿಟಿಸಿಎಲ್ ಹಾಗೂ ಎಸ್ಕಾಂ ನವರೊಂದಿಗೆ ನಮ್ಮ ಸಚಿವರು ಸಂಪರ್ಕದಲ್ಲಿದ್ದಾರೆ. ಸಮಸ್ಯೆ ಬಗೆಹರಿಸಲಾಗುವುದು ಎಂದು ಎಂದು ತಿಳಿಸಿದರು.
ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ಸಿಬ್ಬಂದಿ ನೀಡಿದ ಬಂದ್ ಕರೆ ಕುರಿತು ಪ್ರತಿಕ್ರಿಯಿಸಿ, ಇಂಧನ ಸಚಿವ ವಿ ಸುನೀಲ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಶೀಘ್ರದಲ್ಲೇ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗುವುದು ಎಂದರು.
ಇದನ್ನೂ ಓದಿ: ಸಕ್ಕರೆ ನಾಡಿನಲ್ಲಿ ಪಿಎಂ ಮಿಂಚಿನ ಸಂಚಾರ: ದಳಪತಿಗಳ ಭದ್ರಕೋಟೆ ಛಿದ್ರಗೊಳಿಸಲು ಮೋದಿ ರೋಡ್ ಶೋ ಬ್ರಹ್ಮಾಸ್ತ್ರ!
ನಂತರ ಗದಗ ಜಿಲ್ಲೆಯ ರೋಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಲಕ್ಕುಂಡಿಯನ್ನು ಹಂಪಿ ಸರ್ಕ್ಯೂಟ್‌ಗೆ ಸೇರಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ರೋಣದಲ್ಲಿ ಅಭಿವದ್ಧಿ ಕಾರ್ಯಗಳು ಆಗಿಲ್ಲ ಎಂಬ ದೂರುಗಳು ಬಂದಿವೆ. ಇಡೀ ರಾಜ್ಯದ ಅಭಿವೃದ್ಧಿಗೆ ತಮ್ಮ ಸರಕಾರ ಬದ್ಧವಾಗಿದ್ದು, ರೋಣದ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಕೋವಿಡ್ -19 ಸಾಂಕ್ರಾಮಿಕ ರೋಗ ಸಮಯದಲ್ಲಿ ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರ ಕುಟುಂಬಗಳಿಗೆ ಪರಿಹಾರವನ್ನು ವಿತರಿಸದಿರುವ ಬಗ್ಗೆ ಪ್ರತಿಕ್ರಿಯಿ, ಈ ಕುರಿತು ಕೂಡಲೇ ವಿವರಗಳನ್ನು ಪಡೆದು ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವನ್ನು ವಿತರಿಸಲು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.