ಕಾಂಗ್ರೆಸ್ ಸಭೆ( ಸಂಗ್ರಹ ಚಿತ್ರ)
ಕಾಂಗ್ರೆಸ್ ಸಭೆ( ಸಂಗ್ರಹ ಚಿತ್ರ)

ಕಾಂಗ್ರೆಸ್ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲು ಮಾರ್ಚ್ 17 ರಂದು ಸಿಇಸಿ ಸಭೆ

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ, ಮಾರ್ಚ್ 17 ರಂದು ದೆಹಲಿಯಲ್ಲಿ ಸಿಇಸಿ ಸಭೆ ನಡೆಸಲಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡುವ ಸಾಧ್ಯತೆಯಿದೆ.

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ, ಹೀಗಾಗಿನಕಾಂಗ್ರೆಸ್ ಹೈಕಮಾಂಡ್ ತನ್ನ ಹಿಂದಿನ ಕೇಂದ್ರ ಚುನಾವಣಾ ಸಮಿತಿ (CEC) ಯೊಂದಿಗೆ ಮುಂದುವರಿಸಲು ನಿರ್ಧರಿಸಿದೆ.

ಮಾರ್ಚ್ 17 ರಂದು ದೆಹಲಿಯಲ್ಲಿ ಸಿಇಸಿ ಸಭೆ ನಡೆಸಲಿದೆ.  ಈ ಸಭೆಯಲ್ಲಿ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡುವ ಸಾಧ್ಯತೆಯಿದೆ. ಮೊದಲ ಪಟ್ಟಿಯನ್ನು ಮಾರ್ಚ್ 20 ರೊಳಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಸಿಇಸಿ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎಕೆ ಆಂಟನಿ, ಅಂಬಿಕಾ ಸೋನಿ, ಕೆಸಿ ವೇಣುಗೋಪಾಲ್, ಗಿರಿಜಾ ವ್ಯಾಸ್, ಜನಾರ್ದನ್ ದ್ವಿವೇದಿ, ಮುಕುಲ್ ವಾಸ್ನಿಕ್, ಎಂ ವೀರಪ್ಪ ಮೊಯ್ಲಿ ಮತ್ತು ಮೊಹ್ಸಿನಾ ಕಿದ್ವಾಯಿ ಇದರ ಸದಸ್ಯರಾಗಿದ್ದಾರೆ.

ಇದರಲ್ಲಿ ಸ್ಕ್ರೀನಿಂಗ್ ಕಮಿಟಿ ಮುಖ್ಯಸ್ಥ ಮೋಹನ್ ಪ್ರಕಾಶ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಇದ್ದಾರೆ.

ಸಿಇಸಿ ಸಭೆಯಲ್ಲಿ 224 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಬಗ್ಗೆ ಚರ್ಚಿಸುತ್ತದೆ, ಇದು ಮೊದಲ ಪಟ್ಟಿಯಲ್ಲಿ 120-140 ಹೆಸರುಗಳನ್ನು ಪೈನಲ್ ಮಾಡುವ ಸಾಧ್ಯತೆಯಿದೆ.  ಮಾರ್ಚ್ 18 ಮತ್ತು 20 ರ ನಡುವೆ ಬಿಡುಗಡೆ ಮಾಡಲಾಗುವುದು.  

ಕಾಂಗ್ರೆಸ್ ಸೇರುವ ಸಾಧ್ಯತೆಯಿರುವ ಕ್ಷೇತ್ರಗಳಿಗೆ ಪಕ್ಷವು ಕೆಲವು ಸ್ಥಾನಗಳನ್ನು ಮೀಸಲಿಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ರಾಜ್ಯದ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಜಮಾಯಿಸಲು ಪ್ರಾರಂಭಿಸಿದ್ದು, ತಮಗಾಗಿ ಮತ್ತು ತಮ್ಮ ನಿಷ್ಠಾವಂತರಿಗೆ ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ. ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರು ಈಗಾಗಲೇ ಖರ್ಗೆ ಅವರನ್ನು ಭೇಟಿ ಮಾಡಿದ್ದರು.

Related Stories

No stories found.

Advertisement

X
Kannada Prabha
www.kannadaprabha.com