ವಿಧಾನಸಭೆ ಚುನಾವಣೆ: ಜೆಡಿಎಸ್ ನಂತರ ಎಸ್ ಡಿಪಿಐ, ಕೆಆರ್ ಆರ್ ಎಸ್ ಜೊತೆ ಮೈತ್ರಿಗೆ ಬಿಎಸ್ ಪಿ ಮುಂದು!

ಮುಂಬರುವ ಚುನಾವಣೆಯಲ್ಲಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಮೂರು ಪ್ರಮುಖ ಪಕ್ಷಗಳ ವಿರುದ್ಧ ಹೋರಾಡಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಜೊತೆ ಮಾತುಕತೆ ನಡೆಸುತ್ತಿದೆ.
ಬಿಎಸ್ ಪಿ ಲೋಗೋ
ಬಿಎಸ್ ಪಿ ಲೋಗೋ

ಮೈಸೂರು: ಮುಂಬರುವ ಚುನಾವಣೆಯಲ್ಲಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಮೂರು ಪ್ರಮುಖ ಪಕ್ಷಗಳ ವಿರುದ್ಧ ಹೋರಾಡಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಜೊತೆ ಮಾತುಕತೆ ನಡೆಸುತ್ತಿದೆ.

ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಹೋರಾಡಲು ರಾಜ್ಯಾದ್ಯಂತ ಪ್ರಗತಿಪರ ಸಂಘಟನೆಗಳ ಬೆಂಬಲವನ್ನೂ ಕೋರುತ್ತಿದೆ.

2018 ರ ವಿಧಾನಸಭಾ ಚುನಾವಣೆಯಲ್ಲಿ, ಬಿಎಸ್ ಪಿ  ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು,  20 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು, ಆದರೆ ಕೊಳ್ಳೇಗಾಲ (SC) ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಆದರೆ ಮೂರು ಪ್ರಮುಖ ಪಕ್ಷಗಳಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ  ಮಾಡಿಕೊಳ್ಳುವುದಿಲ್ಲ ಎಂದು ಪಕ್ಷವು ಈಗ ನಿರ್ಧರಿಸಿದೆ.

ಕಳೆದ ಚುನಾವಣೆಯಲ್ಲಿ ಜೆಡಿ(ಎಸ್) ವರಿಷ್ಠ ಎಚ್‌ಡಿ ದೇವೇಗೌಡ ಮತ್ತು ಅವರ ಪುತ್ರ, ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರನ್ನು ಮೈತ್ರಿಗೆ ಸಂಪರ್ಕಿಸಿದ್ದರು. ಇದು ಆಗಿನ ಬಿಎಸ್ಪಿಯ ರಾಜ್ಯ ಮುಖ್ಯಸ್ಥ ಎನ್ ಮಹೇಶ್ ಕರ್ನಾಟಕದಲ್ಲಿ ಪಕ್ಷದ ಏಕೈಕ ಸ್ಥಾನವನ್ನು ಗೆಲ್ಲಲು ಸಹಾಯ ಮಾಡಿತು.

ಆದರೆ, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿ ಸೇರ್ಪಡೆಗೊಂಡ ಮಹೇಶ್ ಅವರು ಬಿಜೆಪಿಗೆ ಸೇರಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು, ಬಿಎಸ್ಪಿ ಮತ್ತು  ಕಾರ್ಯಕರ್ತರನ್ನು ವಿಚಿತ್ರ ಸ್ಥಿತಿಗೆ ತಂದರು.

ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಮತ್ತು ಹಳೇ ಮೈಸೂರು ಮತ್ತು ಉತ್ತರ ಮಧ್ಯ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ರೈತ ಸಂಘವನ್ನು ಹೊಂದಿರುವ ಬಿಎಸ್‌ಪಿ ಈಗ ಮೈಸೂರಿನ ನರಸಿಂಹ    ರಾಜ ಕ್ಷೇತ್ರದಲ್ಲಿ ಎಸ್‌ಡಿಪಿಐ, ಮೇಲುಕೋಟೆ ಕ್ಷೇತ್ರದ ಕೆಆರ್‌ಆರ್‌ಎಸ್ ಮತ್ತು ಇತರ ಕೆಲವು ಕ್ಷೇತ್ರಗಳಲ್ಲಿ ಬೆಂಬಲಿಸಲು ಯೋಜಿಸಿದೆ.

ಬಿಎಸ್‌ಪಿಯು ನಗರ ಮತ್ತು ಗ್ರಾಮೀಣ ಪ್ರದೇಶದ ಯುವಕರು ಮತ್ತು ವಿದ್ಯಾವಂತ ಮತದಾರರನ್ನು ಗೆಲ್ಲುವತ್ತ ದೃಷ್ಟಿ ನೆಟ್ಟಿದೆ.  ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಫೆಲೋಶಿಪ್‌ಗಳಂತಹ ವಿವಿಧ ಪ್ರಯೋಜನಗಳನ್ನು ಹೇಗೆ ನಿರಾಕರಿಸಿದವು ಎಂಬುದನ್ನು ಎತ್ತಿ ತೋರಿಸಲು ಯೋಜನೆ ರೂಪಿಸಿದೆ.

ಜನರು ನಂಬಿಕೆ ಕಳೆದುಕೊಂಡಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಪರ್ಯಾಯವಾಗಿ ಎಸ್‌ಡಿಪಿಐ, ಕೆಆರ್‌ಆರ್‌ಎಸ್ ಮತ್ತು ಪ್ರಗತಿಪರ ಸಂಘಟನೆಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಹೇಳಿದರು. ಈ ಪ್ರಸ್ತಾಪವನ್ನು ಮಾಯಾವತಿಯವರ ಮುಂದೆ  ಇಡುವುದಾಗಿ ಒಪ್ಪಂದಕ್ಕೆ ಆದಷ್ಟು ಬೇಗ ಅವರ ಒಪ್ಪಿಗೆ ಪಡೆಯುವುದಾಗಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com