ಕನ್ನಡಿಗರ ಸ್ವಾಭಿಮಾನ, ಕನ್ನಡದ ನೆಲ ಬಲಿ ಕೊಡುತ್ತಿರುವ ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು: ಡಿಕೆಶಿ ಆಗ್ರಹ

ಕನ್ನಡಿಗರ ಸ್ವಾಭಿಮಾನ, ಕನ್ನಡದ ನೆಲ ಬಲಿ ಕೊಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಬುಧವಾರ ಆಗ್ರಹಿಸಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಕನ್ನಡಿಗರ ಸ್ವಾಭಿಮಾನ, ಕನ್ನಡದ ನೆಲ ಬಲಿ ಕೊಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಬುಧವಾರ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಗಡಿ ಭಾಗದಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಮಹಾರಾಷ್ಟ್ರ ಸರ್ಕಾರ 54 ಕೋಟಿ ರೂ. ಬಿಡುಗಡೆ ಮಾಡಿರುವುದು ಕರ್ನಾಟಕಕ್ಕೆ ಮಾಡಿದ ಅವಮಾನವಾಗಿದೆ. ಕರ್ನಾಟಕದ ಒಂದು ಇಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ. ನಮ್ಮ ನೆಲ, ಜಲ, ಭಾಷೆಯ ರಕ್ಷಣೆಗೆ ಸಮರ್ಥರಾಗಿದ್ದೇವೆ. ಮಹಾರಾಷ್ಟ್ರದ ಆರೋಗ್ಯ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ಮಹಾರಾಷ್ಟ್ರದ ಗಡಿಬಾಗದ ಹಳ್ಳಿಗಳಲ್ಲಿ ವಿವಿಧ ಯೋಜನೆಯ ಜಾರಿಗೆ ಮಹಾರಾಷ್ಟ್ರ ಸರ್ಕಾರ ರೂ.54 ಕೋಟಿ ಮಂಜೂರು ಮಾಡಿರುವುದು ಕನ್ನಡಿಗರ ಸ್ವಾಭಿಮಾನ ಕೆಣಕುವಂತಹ ನಡೆ. ನಾಡಿನ ಹಿತಕ್ಕೆ ಜೀವ ಪಣಕ್ಕಿಟ್ಟು ಹೊರಡಲು ನಾವು ಸಿದ್ದ. ಕನ್ನಡಿಗರ ಸ್ವಾಭಿಮಾನ, ಕನ್ನಡದ ನೆಲ ಬಲಿ ಕೊಡುತ್ತಿರುವ ಸಿಎಂ ಬೊಮ್ಮಾಯಿಯವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬೊಮ್ಮಾಯಿ ಅವರೇ, ಕರ್ನಾಟಕದ ಅಭಿವೃದ್ಧಿ ನಿಮ್ಮಿಂದ ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಕೈ ಇಟ್ಟಿದೆಯೇ? ನಮ್ಮ ಸರ್ಕಾರ ದಿವಾಳಿಯಾಗಿದೆಯೇ? ಮೌನದ ಮೂಲಕ ಮಹಾರಾಷ್ಟ್ರ ಸರ್ಕಾರದ ಕಾಲು ಬುಡಕ್ಕೆ ಕನ್ನಡಿಗರ ಸ್ವಾಭಿಮಾನವನ್ನು ಅಡ ಇಟ್ಟಿದ್ದೀರಾ? ಬೆಳಗಾವಿಯಲ್ಲಿನ ಗಡಿ ಜಿಲ್ಲೆಗಳಲ್ಲಿ ಮಹಾರಾಷ್ಟ್ರ ಸರ್ಕಾರದ ಯೋಜನೆಗಳ ಜಾರಿಗೆ ರೂ.54 ಕೋಟಿ ಬಿಡುಗಡೆ ಮಾಡಿರುವುದು ಅಮಿತ್ ಶಾ ಅವರ ಕುಮ್ಮಕ್ಕಿನಿಂದಲಾ? ಇತ್ತೀಚಿಗೆ ಬೆಳಗಾವಿಗೆ ಅಮಿತ್ ಶಾ ಭೇಟಿ ನೀಡಿದ್ದು ಇದಕ್ಕಾಗಿಯೇ? ಇಂದು ಬೆಳಗಾವಿ ಪ್ರವಾಸದಲ್ಲಿರುವ ಬೊಮ್ಮಾಯಿ ಅವರು ಕರ್ನಾಟಕದ ಹಿತ ಕಾಯುವ ಕ್ರಮಗಳನ್ನು ಕೈಗೊಳ್ಳುವರೇ? ಈ ಬಗ್ಗೆ ಸಿಎಂ ಮೌನವೇಕೆ? ಎಂದು ಪ್ರಶ್ನಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com