ಕಾಂಗ್ರೆಸ್ ಚುನಾವಣಾ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ! ಸಿಎಂ ಬೊಮ್ಮಾಯಿ!

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ,  ಬೇರೆನೂ ಅಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. 
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ,  ಬೇರೆನೂ ಅಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. 

ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ ಎಂಬ ಕಾಂಗ್ರೆಸ್ ನ ‘ಗ್ಯಾರಂಟಿ ಕಾರ್ಡ್’ಗೆ ಜನ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು. 

ಕಾಂಗ್ರೆಸ್ ಮೂರು ಪ್ರಮುಖ ಭರವಸೆಗಳನ್ನು ಘೋಷಿಸಿದೆ. ಎಲ್ಲಾ ಕುಟುಂಬಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ( ಗೃಹ ಜ್ಯೋತಿ) ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ. 2,000 ಸಹಾಯಧನ (ಗೃಹ ಲಕ್ಷ್ಮಿ) ಮತ್ತು ಬಿಪಿಎಲ್ ಕುಟುಂಬದ ಎಲ್ಲಾ ಸದಸ್ಯರಿಗೆ 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ. ಅವರ ಮೌಖಿಕ ಭರವಸೆಗಳಲ್ಲಿ ಕಾಂಗ್ರೆಸ್‌ಗೇ ನಂಬಿಕೆ ಇಲ್ಲದಂತಾಗಿದೆ. ಇಲ್ಲವಾದಲ್ಲಿ ಗ್ಯಾರಂಟಿ ಕಾರ್ಡ್  ಅಗತ್ಯ ಎಂದು ಬೊಮ್ಮಾಯಿ ಪ್ರಶ್ನಿಸಿದರು. 

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿ, ಸೋಮಣ್ಣ ಮತ್ತಿತರ ನಡುವಿನ ಭಿನ್ನಾಭಿಪ್ರಾಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಯಡಿಯೂರಪ್ಪ ಪಕ್ಷದ  ದಿಗ್ಗಜ ನಾಯಕರಾಗಿದ್ದು, ಇತರರು ಅವರ ಮಕ್ಕಳಂತೆ. ಕುಟುಂಬದ ಸದಸ್ಯರ ನಡುವಿನ ಭಿನ್ನಾಭಿಪ್ರಾಯಗಳನ್ನು ಯಾವಾಗಲಾದರೂ ಬಗೆಹರಿಸಬಹುದು ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com