ಸಿಟಿ ರವಿ ಮತ್ತಿತರರು
ರಾಜಕೀಯ
ಮೂಡಿಗೆರೆಯಲ್ಲಿ ಹೈಡ್ರಾಮ: ಎಂಪಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಘೇರಾವ್, ಬಿಎಸ್ ವೈ ರೋಡ್ ಶೋ ರದ್ದು
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಇಂದು ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆಯಲ್ಲಿ ದೊಡ್ಡ ಹೈಡ್ರಾಮವೇ ನಡೆಯಿತು.
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಇಂದು ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆಯಲ್ಲಿ ದೊಡ್ಡ ಹೈಡ್ರಾಮವೇ ನಡೆಯಿತು. ಶಾಸಕ ಎಂಪಿ ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡದಂತೆ ಒತ್ತಾಯಿಸಿ ಪಕ್ಷದ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಘೇರಾವ್ ಹಾಕಿದರು.
ಎಂಪಿ ಕುಮಾರಸ್ವಾಮಿ ವಿರುದ್ಧ ಭಿತ್ತಿ ಪತ್ರ ಹಿಡಿದು ಘೋಷಣೆ ಕೂಗಿದ ಕಾರ್ಯಕರ್ತರು, ಯಾವುದೇ ಕಾರಣಕ್ಕೂ ಎಂ.ಪಿ. ಕುಮಾರಸ್ವಾಮಿಗೆ ಬಿಜೆಪಿ ಟಿಕೆಟ್ ನೀಡದಂತೆ ಒತ್ತಾಯಿಸಿದರು.
ಈ ಹೈಡ್ರಾಮದಿಂದ ಬೇಸರಗೊಂಡ ಯಡಿಯೂರಪ್ಪ ರೋಡ್ ಶೋ ರದ್ದುಗೊಳಿಸಿದರು. ನಂತರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಭಿತ್ತಪತ್ರ ಹಿಡಿಯದಂತೆ, ಘೋಷಣೆ ಕೂಗದಂತೆ ತಾಕೀತು ಮಾಡಿದ ನಂತರ ಕಾರ್ಯಕರ್ತರು ಸುಮ್ಮನಾದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ