ವಿಧಾನಸಭೆ ಚುನಾವಣೆ: ಇಂದು ಕಾಂಗ್ರೆಸ್ ನ ಮೊದಲ ಪಟ್ಟಿ ಅಂತಿಮ, ದೆಹಲಿಯಲ್ಲಿ  ಇಂದು ಕಾಂಗ್ರೆಸ್​ ಕೇಂದ್ರ ಚುನಾವಣಾ ಸಮಿತಿ ಸಭೆ

ವಿಧಾನಸಭೆ ಚುನಾವಣಾ ಕಾವು ರಂಗೇರುತ್ತಿದೆ. ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಆಡಳಿತ ಪಕ್ಷ ಬಿಜೆಪಿಯ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮೇಲೆ ಕುತೂಹಲ ನೆಟ್ಟಿದೆ.ಚುನಾವಣೆ ಹೊತ್ತಿನಲ್ಲಿ ಸೂಕ್ತ, ಸಮರ್ಥ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡುವುದು ಪಕ್ಷಗಳಿಗೆ ಕಠಿಣ ಕೆಲಸವಾಗಿರುತ್ತದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಿಧಾನಸಭೆ ಚುನಾವಣಾ ಕಾವು ರಂಗೇರುತ್ತಿದೆ. ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಆಡಳಿತ ಪಕ್ಷ ಬಿಜೆಪಿಯ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮೇಲೆ ಕುತೂಹಲ ನೆಟ್ಟಿದೆ.ಚುನಾವಣೆ ಹೊತ್ತಿನಲ್ಲಿ ಸೂಕ್ತ, ಸಮರ್ಥ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡುವುದು ಪಕ್ಷಗಳಿಗೆ ಕಠಿಣ ಕೆಲಸವಾಗಿರುತ್ತದೆ. 

ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ದೆಹಲಿಯಲ್ಲಿ ಎಐಸಿಸಿ‌ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಮೊದಲ ಪಟ್ಟಿ ಹೊರಬೀಳಬಹುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಇಂದು ದೆಹಲಿಯಲ್ಲಿ ಸಭೆ: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ​​ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಚಾರವಾಗಿ ಇಂದು ಶುಕ್ರವಾರ ಮಾಹಿತಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೊದಲ ಪಟ್ಟಿ ಬಿಡುಗಡೆ ವಿಚಾರವಾಗಿ ಚರ್ಚಿಸಲು ಇಂದು ಬೆಳಗ್ಗೆ ದೆಹಲಿಗೆ ತೆರಳಲಿದ್ದೇನೆ. ಇಂದು ಕಾಂಗ್ರೆಸ್​ ಕೇಂದ್ರ ಚುನಾವಣಾ ಸಮಿತಿ ಸಭೆ (CEC) ಸಭೆ ಇದೆ. ಅದು ಮುಗಿದ ಬಳಿಕ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಅವರು ತಿಳಿಸಿದರು. 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು ಅಪರಾಹ್ನ 3 ಗಂಟೆಗೆ ಚುನಾವಣಾ ಸಮಿತಿ ಸಭೆಯು ನಡೆಯಲಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ. ಪರಮೇಶ್ವರ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದೇ ಮಾರ್ಚ್ 20 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಈ ನಂತರ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

ಭಾರೀ ಚರ್ಚೆ, ಟಿಕೆಟ್ ಗಾಗಿ ಲಾಬಿ: ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಟಿಕೆಟ್ ಗಾಗಿ ಭಾರೀ ಲಾಬಿ ನಡೆಯುತ್ತಿವೆ.  ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಬಣ ಮತ್ತು ಡಿ.ಕೆ.ಶಿವಕುಮಾರ್ ಬಣ ಎಂಬ ಎರಡು ಗುಂಪುಗಳು ತಮ್ಮದೇ ಆದ ರೀತಿಯಲ್ಲಿ ಒತ್ತಡ ಹಾಕುತ್ತಿವೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕಿರುವುದು ಮುಖ್ಯ ಮಾನದಂಡ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com