ರಾಹುಲ್ ಗಾಂಧಿಯವರ 'ಯುವ ಕ್ರಾಂತಿ' ರ್‍ಯಾಲಿ ನಂತರ ಕಾಂಗ್ರೆಸ್ ಮೊದಲ ಪಟ್ಟಿ: ಸಲೀಂ ಅಹ್ಮದ್
ಮಾರ್ಚ್ 20 ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಐಸಿಸಿ ಮಾಜಿ ಮುಖ್ಯಸ್ಥ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರ ಯುವ ಕ್ರಾಂತಿ ರ್‍ಯಾಲಿ ನಂತರ ಕರ್ನಾಟಕದಲ್ಲಿ ಏಪ್ರಿಲ್/ಮೇನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
Published: 19th March 2023 10:30 AM | Last Updated: 19th March 2023 10:33 AM | A+A A-

ಸಲೀ ಅಹ್ಮದ್
ಹುಬ್ಬಳ್ಳಿ: ಮಾರ್ಚ್ 20 ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಐಸಿಸಿ ಮಾಜಿ ಮುಖ್ಯಸ್ಥ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರ ಯುವ ಕ್ರಾಂತಿ ರ್‍ಯಾಲಿ ನಂತರ ಕರ್ನಾಟಕದಲ್ಲಿ ಏಪ್ರಿಲ್/ಮೇನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ಸ್ಕ್ರೀನಿಂಗ್ ಕಮಿಟಿ ಈಗಾಗಲೇ ಮೂರು ಬಾರಿ ಸಭೆ ನಡೆಸಿ ಹೆಸರುಗಳನ್ನು ಶಿಫಾರಸು ಮಾಡಿದೆ ಮತ್ತು ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು ಶಿಫಾರಸು ಮಾಡಿದ ಹೆಸರುಗಳ ಬಗ್ಗೆ ಚರ್ಚೆ ನಡೆಸಿದೆ ಎಂದು ಸಲೀಂ ಸುದ್ದಿಗಾರರಿಗೆ ತಿಳಿಸಿದರು.
125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 21 ಅಥವಾ 22 ರೊಳಗೆ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.
ಇದನ್ನೂ ಓದಿ: ಮಾರ್ಚ್ 20 ರಂದು ಬೆಳಗಾವಿಗೆ ರಾಹುಲ್ ಗಾಂಧಿ ಭೇಟಿ
ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನ ಬಹುತೇಕ ಹಾಲಿ ಶಾಸಕರು ಟಿಕೆಟ್ ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದ ಸಲೀಂ, ಬಹುತೇಕ ಆರಂಭಿಕ ಸಮೀಕ್ಷೆಗಳು ಪಕ್ಷ 140 ಸ್ಥಾನಗಳಲ್ಲಿ ಗೆಲುವುದು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ ಎಂದು ಹೇಳಿದರು.