
ಸಿದ್ದರಾಮಯ್ಯ
ಕೋಲಾರ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೋಲಾರ ಭೇಟಿಯನ್ನು ದಿಢೀರ್ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಕೋಲಾರ ಕ್ಷೇತ್ರದ ಗ್ರಾಮಾಂತರ ಪ್ರದೇಶದಲ್ಲಿ ಮಾರ್ಚ್ 19ರಂದು, ನಗರ ಪ್ರದೇಶದಲ್ಲಿ ಮಾರ್ಚ್ 21ರಂದು ಪ್ರಚಾರ ಹಾಗೂ ಸಾರ್ವಜನಿಕ ಸಭೆ ನಡೆಸಲು ವೇಳಾಪಟ್ಟಿ ನಿಗದಿಯಾಗಿತ್ತು.
ಈ ಸಂಬಂಧ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಶಾಸಕ ಕೆ.ಶ್ರೀನಿವಾಸಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲ್ ಕುಮಾರ್ ಹಾಗೂ ನಸೀರ್ ಅಹಮದ್ ಪೂರ್ವಭಾವಿ ಸಭೆ ನಡೆಸಿ ಸ್ವಾಗತಕ್ಕೆ ಸಿದ್ಧರಾಗಿದ್ದರು. ಆದರೀಗ ಭೇಟಿಯನ್ನು ದಿಢೀರ್ ರದ್ದು ಮಾಡಲಾಗಿದೆ.