ವಿಧಾನಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ.
Published: 20th March 2023 02:31 PM | Last Updated: 20th March 2023 06:54 PM | A+A A-

ಆಮ್ ಆದ್ಮಿ ಪಾರ್ಟಿ
ಬೆಂಗಳೂರು: ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಪಂಜಾಬ್‌ನಲ್ಲಿ ಅಧಿಕಾರ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ (Aam Aadmi Party), ಇದೀಗ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಬ್ರಿಜೇಶ್ ಕಾಳಪ್ಪ ಸೇರಿದಂತೆ ಹಲವರ ಸಮ್ಮುಖದಲ್ಲಿ ಪಟ್ಟಿ ಬಿಡುಗಡೆ ಮಾಡಿದೆ.
ಮೊದಲ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಇಂದು ನಾವು ಬಿಡುಗಡೆ ಮಾಡುತ್ತಿರುವ ಮೊದಲ ಲಿಸ್ಟ್ ಜೊತೆಗೆ ಬೆಸ್ಟ್ ಲಿಸ್ಟ್. ಭ್ರಷ್ಟಾಚಾರ ರಹಿತ ಜನ ಸಾಮಾನ್ಯರಿಗೆ ನಮ್ಮ ಪಕ್ಷ ಟಿಕೆಟ್ ನೀಡುತ್ತಿದೆ. 10 ವರ್ಷದಲ್ಲಿ ನಮ್ಮ ಪಕ್ಷ ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ. ಕಡಿಮೆ ಸಮಯದಲ್ಲಿ ನಮ್ಮ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದರು.
ಮೊದಲ ಪಟ್ಟಿ ಬಿಡುಗಡೆ
— AAP Karnataka (@AAPKarnataka) March 20, 2023
80 ಜನ ಆಕ್ಷಾಂಕ್ಷಿಗಳು ಇಂದು ಅಭ್ಯರ್ಥಿಗಳಾಗಿ ಭಡ್ತಿ ಪಡೆದಿರುವಿರಿ
ಅಭಿನಂದನೆಗಳು
All the best #PorakeyeParihara #ಬಂದಿದೆಚುನಾವಣೆತನ್ನಿಬದಲಾವಣೆ pic.twitter.com/JlVBJEO1sK