ಟಿಪ್ಪು ಸಾವಿನ ಬಗ್ಗೆ ಹೊಸದಾಗಿ ಇತಿಹಾಸ ಸೃಷ್ಟಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

ಊರಿಗೌಡ ಮತ್ತು ನಂಜೇಗೌಡ ಎಂಬ ಐತಿಹಾಸಿಕ ಪಾತ್ರಗಳನ್ನು ಹೊಸದಾಗಿ ಸೃಷ್ಟಿಸಿ, ಅವರು ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರನ್ನು ಕೊಂದಿದ್ದಾರೆ ಎಂದು ಪ್ರಚಾರ ಮಾಡುತ್ತಿರುವ ಆಡಳಿತಾರೂಢ ಬಿಜೆಪಿ ನಾಯಕರ ವಿರುದ್ಧ ರಾಜ್ಯ ಕಾಂಗ್ರೆಸ್ ಸೋಮವಾರ ತೀವ್ರ ವಾಗ್ದಾಳಿ ನಡೆಸಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಳಗಾವಿ: ಊರಿಗೌಡ ಮತ್ತು ನಂಜೇಗೌಡ ಎಂಬ ಐತಿಹಾಸಿಕ ಪಾತ್ರಗಳನ್ನು ಹೊಸದಾಗಿ ಸೃಷ್ಟಿಸಿ, ಅವರು ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರನ್ನು ಕೊಂದಿದ್ದಾರೆ ಎಂದು ಪ್ರಚಾರ ಮಾಡುತ್ತಿರುವ ಆಡಳಿತಾರೂಢ ಬಿಜೆಪಿ ನಾಯಕರ ವಿರುದ್ಧ ರಾಜ್ಯ ಕಾಂಗ್ರೆಸ್ ಸೋಮವಾರ ತೀವ್ರ ವಾಗ್ದಾಳಿ ನಡೆಸಿದೆ. ಇದು ಚುನಾವಣೆಗಾಗಿ ಇತಿಹಾಸ ತಿರುಚಿದ್ದು, ಒಕ್ಕಲಿಗ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಈ ಹೊಸ ಪಾತ್ರದಾರಿಗಳನ್ನು ಸೃಷ್ಟಿಸಿದ್ದಾರೆ ಎಂದರು.

ಊರಿಗೌಡ ಮತ್ತು ನಂಜೇಗೌಡರ ಪಾತ್ರಗಳನ್ನು ಹೊಸದಾಗಿ ಸೃಷ್ಟಿಸಿ ಜಾತಿ ಬಣ್ಣ ಹಚ್ಚಿ, ಇತಿಹಾಸ ತಿರುಚುತ್ತಿರುವುದು ಸರಿಯಲ್ಲ. ಇದನ್ನು ಖಂಡಿಸುತ್ತೇನೆ. ಈ ಸಂಬಂಧ  ನಿರ್ಮಲಾನಂದನಾಥ ಸ್ವಾಮೀಜಿ ಪ್ರತಿಭಟನೆ ನೇತೃತ್ವ ವಹಿಸಬೇಕು ಮತ್ತು ಸಭೆ ಕರೆಯುವಂತೆ ಒತ್ತಾಯಿಸುತ್ತೇನೆ. ಸಮಾಜದಲ್ಲಿ ವಿಷಬೀಜ ಬಿತ್ತಲು ಬಿಡಲ್ಲ ಎಂದು ಕಿಡಿಕಾರಿದರು.

ವಾಟ್ಸ್ ಆ್ಯಪ್ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಬರೆದಿರುವ ಕೃತ್ಯವನ್ನು ಬಿಜೆಪಿಯವರು  ಖಂಡಿಸಬೇಕು. ಸಮಾಜದಲ್ಲಿ ವೈಷಮ್ಯ ತರುವ ಕೇಸರಿ ಪಕ್ಷದ ಪ್ರಯತ್ನವನ್ನು ನಿಲ್ಲಿಸಬೇಕು. ಈ ದಿಸೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು. ಇನ್ನು ರಾಜಿ ಸಂಧಾನಕ್ಕಾಗಿ ಸಭೆ ನಡೆಸಬಾರದು, ಈ ನಿಟ್ಟಿನಲ್ಲಿ ಪ್ರತಿಭಟನೆ ನಡೆಸಬೇಕು, 200 ವರ್ಷಗಳ ಹಿಂದೆ ನಡೆದಿರುವ ಘಟನೆಗಳು, ಉರಿಗೌಡ, ನಂಜೇಗೌಡ ಪಾತ್ರಗಳನ್ನು ಸೃಷ್ಟಿಸಿ ಒಕ್ಕಲಿಗ ಸಮುದಾಯಕ್ಕೆ ಅವಮಾನ ಮಾಡಲಾಗಿದೆ, ಶಾಂತಿ ಕದಡಲು ಯತ್ನಿಸುತ್ತಿರುವವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಮೈಸೂರು ದೊರೆ ಟಿಪ್ಪು ಸುಲ್ತಾನ್‌ನನ್ನು ಬ್ರಿಟಿಷರು ಕೊಂದಿಲ್ಲ, ಒಕ್ಕಲಿಗ ಸೈನಿಕರಾದ ಊರೇಗೌಡ ಮತ್ತು ನಂಜೇಗೌಡರು ಕೊಂದಿದ್ದಾರೆ ಎಂದು ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ವಿಚಾರ ರಾಜ್ಯದಲ್ಲಿ ವಿವಾದ ಎಬ್ಬಿಸಿದೆ. ಉರಿಗೌಡ ಮತ್ತು ನಂಜೇಗೌಡರ ಮೇಲೆ ಸಿನಿಮಾ ಮಾಡುವ ಪ್ರಯತ್ನ ನಡೆದಿದ್ದು, ನಂತರ ಘೋಷಣೆಯನ್ನು ಹಿಂಪಡೆಯಲಾಗಿದೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಒಕ್ಕಲಿಗ ಸಮುದಾಯದವರನ್ನು ಒಕ್ಕಲಿಗ ಸಮುದಾಯದವರನ್ನು ಒಲಿಸಿಕೊಳ್ಳಲು ಬಿಜೆಪಿಯವರು ಊರೇಗೌಡ ಮತ್ತು ನಂಜೇಗೌಡರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಆದಾಗ್ಯೂ, ಟಿಪ್ಪು ಸುಲ್ತಾನ್‌ಗೆ ಸಂಬಂಧಿಸಿದ ಎಲ್ಲವನ್ನೂ ಇತಿಹಾಸಕಾರರು ಮುಸ್ಲಿಂ ತುಷ್ಟೀಕರಣದ ಭಾಗವಾಗಿ ವೈಭವೀಕರಿಸುತ್ತಾರೆ ಮತ್ತು ನಿಜವಾದ ಇತಿಹಾಸವನ್ನು ಎಂದಿಗೂ ಹೇಳಲಿಲ್ಲ ಎಂದು ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com