ಕಾಂಗ್ರೆಸ್ ಆಯ್ಕೆಯಾಗುವುದೇ ಗ್ಯಾರಂಟಿ ಇಲ್ಲ: ನಳಿನ್ ಕುಮಾರ್ ಕಟೀಲ್

ಅಧಿಕಾರದಲ್ಲಿದ್ದಾಗ ಏನೂ ಮಾಡದ ಕಾಂಗ್ರೆಸ್, ಇದೀಗ ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದೇ ಗ್ಯಾರೆಂಟಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ವ್ಯಂಗ್ಯವಾಡಿದರು.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಭಟ್ಕಳ: ಅಧಿಕಾರದಲ್ಲಿದ್ದಾಗ ಏನೂ ಮಾಡದ ಕಾಂಗ್ರೆಸ್, ಇದೀಗ ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದೇ ಗ್ಯಾರೆಂಟಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ವ್ಯಂಗ್ಯವಾಡಿದರು.

ಭಟ್ಕಳದಲ್ಲಿ ಆಯೋಜಿಸಲಾಗಿದ್ದ ಪಕ್ಷದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದೆ. ಅಧಿಕಾರಕ್ಕೆ ಬರುವುದು ಖಚಿತವಾಗದಿರುವುದು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ಗಳ ನೀಡುತ್ತಿರುವುದರ ಹಿಂದಿರುವ ಕಾರಣವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಜನ ಮತ್ತೆ ಕಾಂಗ್ರೆಸ್'ನ್ನು ತಿರಸ್ಕರಿಸಲಿದ್ದಾರೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಹೇಳಿದರು.

ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಜನರಿಗಾಗಿ ಏನನ್ನೂ ಮಾಡಲಿಲ್ಲ. ಹಲವು ದಶಕಗಳ ಕಾಲ ಆಡಳಿತ ನಡೆಸಿದರೂ ಜನರ ಮನೆಗಳಿಗೆ ವಿದ್ಯುತ್ ಒದಗಿಸಲಿಲ್ಲ. ಆದರೀಗ ಉಚಿತ ವಿದ್ಯುತ್ ಬಗ್ಗೆ ಮಾತನಾಡುತ್ತಿದ್ದಾರೆ. ಇದೀಗ ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದೇ ಗ್ಯಾರೆಂಟಿ ಇಲ್ಲ ಎಂದು ಲೇವಡಿ ಮಾಡಿದರು.

ಇದೇ ವೇಳೆ ಕಾಂಗ್ರೆಸ್ ಒಡೆದ ಮನೆ ಎಂದು ಬಣ್ಣಿಸಿದ ಅವರು, ಪಕ್ಷದಲ್ಲಿ ನಾನಾ ಬಣಗಳು ಹುಟ್ಟಿಕೊಂಡಿವೆ. ಕಾಂಗ್ರೆಸ್‌ನಿಂದ ಮೂವರು ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆ. ಸಿದ್ದರಾಮಯ್ಯ ಖರ್ಗೆ ಮತ್ತು ಪರಮೇಶ್ವರ್ ಅವರನ್ನು ಮುಗಿಸಿದ್ದಾರೆ. ಶೀಘ್ರದಲ್ಲೇ ಡಿ ಕೆ ಶಿವಕುಮಾರ್ ಅವರನ್ನೂ ಮುಗಿಸಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಪ್ರಜಾಧ್ವನಿ, ಪಂಚರತ್ನ ರ್ಯಾಲಿಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭವಾದ ಬಳಿಕ ಇದೀಗ ತಣ್ಣಗಾಗಿದ್ದಾರೆಂದು ಹೇಳಿದರು.

ಪಿಎಫ್‌ಐ ನಿಷೇಧದ ಕುರಿತ ಪ್ರಶ್ನೆಗೆ ಉತ್ತರಿಸಿ, ಬಿಜೆಪಿ ಸರ್ಕಾರವು ರಾಷ್ಟ್ರದ ಸುರಕ್ಷತೆ ಮತ್ತು ಭದ್ರತೆಯನ್ನು ಪರಿಗಣಿಸಿ ಪಿಎಫ್ಐನ್ನು ನಿಷೇಧಿಸಿದೆ ಎಂದರು.

ಉರಿಗೌಡ ಮತ್ತು ನಂಜೇಗೌಡರ ವಿವಾದದ ಬಗ್ಗೆ ಮಾತನಾಡಿ, ಅವರು ಇತಿಹಾಸಕಾರರಲ್ಲ, ಆದರೆ ಕಾಂಗ್ರೆಸ್ ರಾಷ್ಟ್ರದ ಇತಿಹಾಸವನ್ನು ತಿರುಚಿದೆ. ಬಹುಶಃ ಇದನ್ನೂ ತಿರುಚಿರಬಹುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com