ಬಿಜೆಪಿಯ ಪಾಪದ ಕೊಡ ತುಂಬಿದೆ, ತನ್ನ ನಾಶಕ್ಕೆ ತಾನೇ ಅಂತಿಮ ಮೊಳೆ ಹೊಡೆದಿದೆ: ಸಿದ್ದರಾಮಯ್ಯ
ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ...
Published: 24th March 2023 05:02 PM | Last Updated: 24th March 2023 05:55 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಬಿಜೆಪಿಯ ಪಾಪದ ಕೊಡ ತುಂಬಿದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ.
ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ.
ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದರಿಗೆ ಬಿಗ್ ಶಾಕ್; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ
ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ, ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ.
— Siddaramaiah (@siddaramaiah) March 24, 2023
ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ.
ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ. 2/5#IndiaWithRG