ವರುಣಾ ಟಿಕೆಟ್ ಕೊಟ್ಟಿದ್ದಾರೆ, ಕೋಲಾರ ಕ್ಷೇತ್ರಕ್ಕೂ ಕೇಳಿದ್ದೇನೆ, ನಿರ್ಧಾರ ಹೈಕಮಾಂಡ್ ಗೆ ಬಿಟ್ಟದ್ದು: ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಧಿಕೃತವಾಗಿ ಕಾಂಗ್ರೆಸ್‌ ಚುನಾವಣಾ ಅಖಾಡಕ್ಕಿಳಿದಿದ್ದು, 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಧಿಕೃತವಾಗಿ ಕಾಂಗ್ರೆಸ್‌ ಚುನಾವಣಾ ಅಖಾಡಕ್ಕಿಳಿದಿದ್ದು, 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಇತ್ತ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದ್ದ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ವರುಣಾ ಕ್ಷೇತ್ರಕ್ಕೆ ಟಿಕೆಟ್‌ ನೀಡಿದೆ. ಈ ಕುತೂಹಲದ ಮಧ್ಯೆ ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿಲ್ಲ. ಈ ಮೂಲಕ ಸಿದ್ದರಾಮಯ್ಯ ವರುಣಾ ಜೊತೆಗೆ ಕೋಲಾರದಿಂದಲೂ ಸ್ಪರ್ಧಿಸುತ್ತಾರಾ ಅನ್ನೋ ಕುತೂಹಲ ಮುಂದುವರಿದಿದೆ.

ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈ ಕಮಾಂಡ್ ವರುಣಾ ಕ್ಷೇತ್ರದ ಟಿಕೆಟ್ ಘೋಷಿಸಿದೆ, ಈ ಮೊದಲು ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದರು, ಆದರೆ ಹೈಕಮಾಂಡ್ ಕೋಲಾರದಿಂದ ಸ್ಪರ್ಧಿಸದಂತೆ ಸಲಹೆ ನೀಡಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ವರುಣಾ ಮತ್ತು ಕೋಲಾರ ಎರಡು ಕಡೆ ಟಿಕೆಟ್‌ ಕೊಡುವಂತೆ ಹೈಕಮಾಂಡ್‌ಗೆ ಕೇಳಿದ್ದೇನೆ. ವರುಣಾದಲ್ಲಿ ನಿಲ್ಲುವಂತೆ ಹೈಕಮಾಂಡ್‌ನವರು ಹೇಳಿದ್ದಾರೆ. ಕೋಲಾರ ಕೂಡ ಕೇಳಿದ್ದೇನೆ. ಆದರೆ, ಹೈಕಮಾಂಡ್ ನಿರ್ಧಾರವೇ ಅಂತಿಮ’ ಸಿದ್ದರಾಮಯ್ಯ ಹೇಳಿದರು.

ಮೊದಲ ಪಟ್ಟಿ ಬಿಡುಗಡೆಯಾಗಿದೆ. ಒಂದೇ ಹೆಸರು, ಗೊಂದಲ ಇಲ್ಲದ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆಯಾಗಿದೆ. ಸ್ಕ್ರೀನಿಂಗ್ ಹಾಗೂ ಸಿಇಸಿ ಸಭೆಯಲ್ಲಿ ಚರ್ಚೆ ನಡೆದು ಪಟ್ಟಿ ಬಿಡುಗಡೆ ಮಾಡಲಾಗಿದೆ’ ಎಂದರು.

ಟಿಕೆಟ್‌ ನೀಡಲು ಸಮೀಕ್ಷೆ ಒಂದೇ ಮಾನದಂಡ ಅಲ್ಲ. ಕಾರ್ಯಕರ್ತರ ಅಭಿಪ್ರಾಯವೂ ಮುಖ್ಯವಾಗಿತ್ತು. ಪಕ್ಷದ ಕಾರ್ಯಾಧ್ಯಕ್ಷರು, ಉಸ್ತುವಾರಿ ಕಾರ್ಯದರ್ಶಿಗಳು ಕೂಡ ವರದಿ ಕೊಟ್ಟಿದ್ದರು. ಜಿಲ್ಲಾಧ್ಯಕ್ಷ, ಬ್ಲಾಕ್ ಅಧ್ಯಕ್ಷರ ಅಭಿಪ್ರಾಯವನ್ನೂ ಪಡೆದಿದ್ದೆವು. ಅದರ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಿದ್ದೇವೆ’ ಎಂದೂ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com