ಮೀಸಲಾತಿ ಬದಲಾವಣೆ ಚುನಾವಣಾ ಗಿಮಿಕ್: ಸಿದ್ದರಾಮಯ್ಯ
ಮೀಸಲಾತಿ ಬದಲಾವಣೆಯಿಂದ ಯಾರಿಗೂ ಪ್ರಯೋಜನವಾಗದು, ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ಪ್ರಯತ್ನಗಳ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
Published: 25th March 2023 08:40 AM | Last Updated: 25th March 2023 03:00 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಮೀಸಲಾತಿ ಬದಲಾವಣೆಯಿಂದ ಯಾರಿಗೂ ಪ್ರಯೋಜನವಾಗದು, ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ಪ್ರಯತ್ನಗಳ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಚುನಾವಣಾ ಗಿಮಿಕ್’ ಅಷ್ಟೇ. “ಸರ್ಕಾರವು ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿದೆ. ಅದನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ವಿತರಿಸಿದೆ. ಒಂದು ಸಮುದಾಯದಿಂದ ಇನ್ನೊಂದು ಸಮುದಾಯಕ್ಕೆ ಕೊಡಲು ಮೀಸಲಾತಿಯನ್ನು ಕಸಿದುಕೊಳ್ಳಲಾಗಿದೆ. ಬಿಜೆಪಿಯವರು ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ಪ್ರಕಟ; ಮುಸ್ಲಿಮರ 2ಬಿ ಮೀಸಲಾತಿ ರದ್ದು
ಆರ್ಥಿಕವಾಗಿ ದುರ್ಬಲ ವರ್ಗದ ಕೋಟಾದಡಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆದರೆ, ಅದು ಸುಲಭವಲ್ಲ ತಿಳಿಸಿದರು. ಎಸ್‌ಸಿಗಳಿಗೆ ಒಳಮೀಸಲಾತಿ ವಿಚಾರ ಸುದೀರ್ಘ ಪ್ರಕ್ರಿಯೆಯಾಗಿದೆ ಎಂದು ಹೇಳಿದರು.