ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಕಣದಲ್ಲಿರುವ ಪ್ರಮುಖರು ಯಾರ್ಯಾರು?
ಮೊನ್ನೆ ಯುಗಾದಿಯಂದು ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಶನಿವಾರ ಬೆಳಗ್ಗೆ ಬಿಡುಗಡೆಯಾಗಿದೆ.
Published: 25th March 2023 08:52 AM | Last Updated: 25th March 2023 03:01 PM | A+A A-

ಕಾಂಗ್ರೆಸ್ ಪಟ್ಟಿಯಲ್ಲಿ ಸ್ಪರ್ಧೆಯಲ್ಲಿರುವ ಪ್ರಮುಖರು
ಬೆಂಗಳೂರು: ಮೊನ್ನೆ ಯುಗಾದಿಯಂದು ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಶನಿವಾರ ಬೆಳಗ್ಗೆ ಬಿಡುಗಡೆಯಾಗಿದೆ.
ಮೊದಲ ಪಟ್ಟಿಯಲ್ಲಿ 8 ಮಂದಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರದ ಟಿಕೆಟ್ ನೀಡಲಾಗಿದ್ದು ಅವರ ಪುತ್ರ ಹಾಲಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯಗೆ ಇನ್ನೂ ಕ್ಷೇತ್ರ ನಿಗದಿಯಾಗಿಲ್ಲ. ಚನ್ನಪಟ್ಟಣದ ಅಭ್ಯರ್ಥಿಯ ಹೆಸರು ಘೋಷಿಸಿಲ್ಲ, ಇನ್ನು ಸಿದ್ದರಾಮಯ್ಯನವರು ಸ್ಪರ್ಧಿಸುತ್ತೇನೆ ಎಂದು ಹೇಳುತ್ತಿದ್ದ ಕೋಲಾರ ಮತ್ತು ಅವರು ಹಾಲಿ ಶಾಸಕರಾಗಿರುವ ಬಾದಾಮಿ ಕ್ಷೇತ್ರದ ಅಭ್ಯರ್ಥಿಯ ಹೆಸರು ಘೋಷಣೆಯಾಗಿಲ್ಲ.
ಮೊದಲ ಪಟ್ಟಿಯಲ್ಲಿ ಘೋಷಣೆಯಾಗಿರುವ 124 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವವರ ವಿವರ ಇಂತಿದೆ: