ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ: ಕರಾವಳಿ ಜಿಲ್ಲೆಗಳ ವಿಧಾನಸಭೆ ಚುನಾವಣೆಯಲ್ಲಿ ಮೂವರು ಮಾಜಿ ಸಚಿವರು!

ಮುಂಬರುವ ವಿಧಾನಸಭೆ ಚುನಾವಣೆಗಾಗಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯ ಮಾಜಿ ಸಚಿವರಾದ ಬಿ ರಮಾನಾಥ್ ರೈ, ಯುಟಿ ಖಾದರ್ ಮತ್ತು ವಿನಯ್ ಕುಮಾರ್ ಸೊರಕೆ ಅವರಿಗೆ ಟಿಕೆಟ್ ಲಭ್ಯವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗಾಗಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯ ಮಾಜಿ ಸಚಿವರಾದ ಬಿ ರಮಾನಾಥ್ ರೈ, ಯುಟಿ ಖಾದರ್ ಮತ್ತು ವಿನಯ್ ಕುಮಾರ್ ಸೊರಕೆ ಅವರಿಗೆ ಟಿಕೆಟ್ ಲಭ್ಯವಾಗಿದೆ.

ಖಾದರ್ ಮತ್ತು ರೈ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಉಡುಪಿಯ ಕಾಪು ಕ್ಷೇತ್ರದಿಂದ ವಿನಯ್ ಕುಮಾರ್ ಸೊರಕೆ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಐದು ಮತ್ತು ಉಡುಪಿಯ ಮೂರು ಸ್ಥಾನಗಳಿಗೆ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದಿಂದ ಸ್ಪರ್ಧಿಸಿ ಸೋತಿದ್ದ ಮಿಥುನ್ ರೈ ಮೂಡುಬಿದಿರೆಯಿಂದ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಮ್ ಮತ್ತು ಸುಳ್ಯ (ಎಸ್‌ಸಿ) ಕ್ಷೇತ್ರದಿಂದ ಜಿ ಕೃಷ್ಣಪ್ಪ ಅವರನ್ನು ಕಣಕ್ಕಿಳಿಸಲಾಗಿದೆ.

ಗೋಪಾಲ ಪೂಜಾರಿ ಅವರು ತಮ್ಮ ಹಿಂದಿನ ಕ್ಷೇತ್ರವಾದ ಉಡುಪಿ ಜಿಲ್ಲೆಯ ಬೈಂದೂರಿನಿಂದ ಮತ್ತು ಎಂ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರು ಕುಂದಾಪುರದಿಂದ ಸ್ಪರ್ಧಿಸಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ಎಂಟು ಹಾಗೂ ಉಡುಪಿಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮಂಗಳೂರು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋತಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com