ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ 'ಪಂಜಿನ ಮೆರವಣಿಗೆ'
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದರ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು
ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.
Published: 26th March 2023 11:03 PM | Last Updated: 26th March 2023 11:03 PM | A+A A-

ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದರ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು
ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ ಫ್ರೀಡ್ಂ ಪಾರ್ಕ್ ವರೆಗೆ ಪಂಜಿನ ಮೆರವಣಿಗೆ ಉದ್ದೇಶಿಸಲಾಗಿತ್ತು. ಆದರೆ, ಮಾರ್ಗ ಮಧ್ಯದಲ್ಲಿಯೇ ಅವರನ್ನು ಪೊಲೀಸರು ತಡೆದರು.
ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಪಡಿಸಿರುವುದನ್ನು ಖಂಡಿಸಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ಮೆರವಣಿಗೆಯಲ್ಲಿ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು. #ಬರುತ್ತಿದೆಕಾಂಗ್ರೆಸ್ pic.twitter.com/c0YqP0RBMi
— IYC Karnataka (@IYCKarnataka) March 26, 2023
ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.