
ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಂದು ರಾಜ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ಕೋರ್ ಕಮಿಟಿ ಸಭೆ ನಡೆಯಿತು.
ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರು, ಶಾಸಕರು ಸಭೆಯಲ್ಲಿ ಪಾಲ್ಗೊಂಡರು.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ನಮ್ಮ ಹಿರಿಯ ನಾಯಕರು ಹಾಗೂ ಕೇಂದ್ರ ಸಚಿವರಾದ ಶ್ರೀ @AmitShah ಅವರ ನೇತೃತ್ವದಲ್ಲಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಭೆ ಹಾಗೂ ರಾಜ್ಯ ಕೋರ್ ಕಮಿಟಿ ಸಭೆ ನಡೆಸಲಾಯಿತು.
1/2 pic.twitter.com/X0clNB1KxX— Nalinkumar Kateel (@nalinkateel) March 26, 2023
ಇದನ್ನೂ ಓದಿ: ವಿಧಾನಸೌಧದ ಎದುರು ಅಶ್ವಾರೋಹಿ ಬಸವಣ್ಣ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದ ಅಮಿತ್ ಶಾ
ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಲಾಗಿದ್ದು, ಮಾರ್ಚ್ 31 ರಂದು ಕೋರ್ ಕಮಿಟಿ ಸದಸ್ಯರೊಂದಿಗೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಭೆಯ ನಂತರ ಅಮಿತ್ ಶಾ ದೆಹಲಿಗೆ ತೆರಳಿದರು.
HM #AmitShah's meeting with #BJP's core committee /campaign committee/election management committee concluded. Amit Shah and other senior leaders left for #Delhi after the meet. March 31st: district level meetings with core committee members on candidates selection. #Karnataka pic.twitter.com/SCVX9cIqD7
— Imran Khan (@KeypadGuerilla) March 26, 2023