ಕರ್ನಾಟಕ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್ ಕಸರತ್ತು!
224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು ಸಜ್ಜಾಗಿದೆ.
Published: 27th March 2023 01:01 PM | Last Updated: 27th March 2023 02:43 PM | A+A A-

ಪ್ರಾತಿನಿಧಿಕ ಚಿತ್ರ
ಬೆಂಗಳೂರು: 224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು ಸಜ್ಜಾಗಿದೆ.
ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಕೆಲ ಕ್ಷೇತ್ರಗಳಿಗೆ ಪ್ರಬಲ ಅಭ್ಯರ್ಥಿಗಳು ಟಿಕೆಟ್ ಆಕಾಂಕ್ಷಿಗಳಾಗಿರುವುದರಿಂದ 30 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ನಿರ್ಣಾಯಕವಾಗಿದೆ ಎಂಬುದು ಪಕ್ಷದ ಒಳಗಿನವರ ಅಭಿಪ್ರಾಯ. ಟಿಕೆಟ್ ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದ್ದು, ಬಿಜೆಪಿಗೆ ಯಾವುದೇ ಲಾಭವಾಗದಂತೆ ಮುಖಂಡರು ಅಭ್ಯರ್ಥಿಗಳನ್ನು ಸೂಕ್ಷ್ಮವಾಗಿ ಪರಿಗಣಿಸುತ್ತಿದ್ದಾರೆ. ಪಕ್ಷವು ಉಳಿದ 100 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಬೇಕಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ: ಕರಾವಳಿ ಜಿಲ್ಲೆಗಳ ವಿಧಾನಸಭೆ ಚುನಾವಣೆಯಲ್ಲಿ ಮೂವರು ಮಾಜಿ ಸಚಿವರು!
ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿರುವ ಮಾಜಿ ಎಂಎಲ್‌ಸಿಗಳಿಗೆ ಪಕ್ಷ ಅವಕಾಶ ಕಲ್ಪಿಸಬೇಕು. ಕಾಂಗ್ರೆಸ್‌ಗಾಗಿ ವರ್ಷಗಳಿಂದ ದುಡಿದ ನಾಯಕರನ್ನೂ ಪರಿಗಣಿಸಬೇಕು ಎಂದು ಪಕ್ಷದ ಮುಖಂಡರು ಈಗಾಗಲೇ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ಏಪ್ರಿಲ್ ಮೊದಲ ಅಥವಾ ಎರಡನೇ ವಾರದಲ್ಲಿ 100 ಅಭ್ಯರ್ಥಿಗಳ ಘೋಷಣೆ ಕುರಿತು ನಾಯಕರು ಎರಡನೇ ಸುತ್ತಿನ ಸಭೆ ನಡೆಸುವ ಸಾಧ್ಯತೆಯಿದೆ. ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ ನಂತರ ಯಾವುದೇ ದೊಡ್ಡ ಅಪಸ್ವರ ಎದುರಾಗದ ಕಾರಣ ಪಕ್ಷವು ಹುರುಪಿನಿಂದ ಕೂಡಿದೆ ಎನ್ನಲಾಗಿದೆ.
ಇದನ್ನೂ ಓದಿ: ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡ ಪ್ರಮುಖ ಅಭ್ಯರ್ಥಿಗಳಿವರು
ಈ ಘೋಷಣೆಯಿಂದ ಪಕ್ಷದ ನಾಯಕರಿಗೆ ಸ್ಪಷ್ಟನೆ ಸಿಕ್ಕಿದ್ದು, ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಈಗಾಗಲೇ ಕೆಲಸ ಆರಂಭಿಸಿದ್ದಾರೆ. ಆದರೆ, ಬಿಜೆಪಿ ಪಾಳಯದಲ್ಲಿ ಅಭ್ಯರ್ಥಿಗಳ ಘೋಷಣೆಯ ಬಗ್ಗೆ ಯಾರಿಗೂ ಕಲ್ಪನೆಯೇ ಇಲ್ಲ. ಮೂಲಗಳ ಪ್ರಕಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಖುದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಮತ್ತು ಈ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.