ವರುಣಾ ಜೊತೆ ಕೋಲಾರದಿಂದಲೂ ಸ್ಪರ್ಧೆ; ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಅಚ್ಚರಿಯಿಲ್ಲ: ಸಿದ್ದರಾಮಯ್ಯ

2023 ಈ ವರ್ಷ ನನ್ನ ಕೊನೆಯ ಚುನಾವಣಾ ಸ್ಪರ್ಧೆ, ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ. ವರುಣಾ ಜೊತೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಈ ಬಾರಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: 2023 ಈ ವರ್ಷ ನನ್ನ ಕೊನೆಯ ಚುನಾವಣಾ ಸ್ಪರ್ಧೆ, ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ. ವರುಣಾ ಜೊತೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಈ ಬಾರಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ವರುಣಾ ಕ್ಷೇತ್ರದಿಂದ ಗೆದ್ದಾಗಲೇ ನಾನು ಮುಖ್ಯಮಂತ್ರಿ ಆಗಿದ್ದು. ನನ್ನ ಕೊನೆಯ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ ಇದೆ. ವರುಣಾ ಜೊತೆಗೆ ಕೋಲಾರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುತ್ತೇನೆ. ಕೋಲಾರ ಕ್ಷೇತ್ರದ ಜನರಿಂದ ನನಗೆ ಸಾಕಷ್ಟು ಒತ್ತಡ ಬರುತ್ತಿದೆ ಎಂದು ಹೇಳಿದ್ದಾರೆ.

ಈ ಬಾರಿ ಪುತ್ರ ಡಾ.ಯತೀಂದ್ರ ಸ್ಪರ್ಧೆ ಮಾಡುವುದಿಲ್ಲ, ನನ್ನ ಗೆಲುವಿಗಾಗಿ ಕ್ಷೇತ್ರದಲ್ಲಿ ಓಡಾಡುತ್ತಾನೆ, ವರುಣಾದಲ್ಲಿ ಕೆಲಸ ಮಾಡುತ್ತಾನೆ. ಅದರ ಬಗ್ಗೆ ಹೆಚ್ಚಿನ ಚರ್ಚೆ ಬೇಡ ಎಂದರು.

ಮೈಸೂರು ಜಿಲ್ಲೆಯ ಎಚ್‍ಡಿ ಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಬಿಜೆಪಿ  ಮತ್ತು ಜೆಡಿಎಸ್ ಮ್ಯಾಚ್ ಫಿಕ್ಸ್ ಮಾಡಿಕೊಂಡಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಅಚ್ಚರಿ ಇಲ್ಲ ಎಂದು ಸ್ಫೋಟಕ ಹೇಳಿಕೆಯನ್ನು ಕೂಡ ನೀಡಿದ್ದಾರೆ.

ಬಿಎಸ್​ವೈ ನಿವಾಸದ ಮೇಲೆ ಕಲ್ಲುತೂರಾಟ ಬಿಜೆಪಿ ಕೈವಾಡ ಇರಬಹುದು: ಶಿಕಾರಿಪುರದಲ್ಲಿ ಬಿಎಸ್​ ಯಡಿಯೂರಪ್ಪ ಮನೆ ಮೇಲೆ ಕಲ್ಲುತೂರಾಟ ಘಟನೆ ಹಿಂದೆ ಬಿಜೆಪಿಯವರ ಕೈವಾಡ ಇರಬಹುದು ಎಂದು ಕೂಡ ಸಿದ್ದರಾಮಯ್ಯ ಹೇಳಿದ್ದಾರೆ. ಬಂಜಾರ ಸಮುದಾಯ ಒಳಮೀಸಲಾತಿ ವಿರೋಧಿಸುತ್ತಾ ಬಂದಿದೆ. ಹೀಗಾಗಿ ನಿನ್ನೆಯೂ ಕೂಡ ಒಳಮೀಸಲಾತಿ ಜಾರಿಗೆ ವಿರೋಧಿಸಿದ್ದಾರೆ. ಯಡಿಯೂರಪ್ಪ ಅವರು ಕಾಂಗ್ರೆಸ್​ ಕಾರ್ಯಕರ್ತರಿಂದ ದಾಳಿ ನಡೆದಿದೆ ಎಂದು ಹೇಳಿಲ್ಲ. ತಪ್ಪು ಗ್ರಹಿಕೆಯಿಂದ ಆಗಿರಬೇಕೆಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com