ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಮಹಿಳಾಮಣಿಯರ ಪೈಪೋಟಿ: ವಿನಯ್ ಕುಲಕರ್ಣಿ ಪತ್ನಿ v/s ಸೀಮಾ ಸಾದಿಖಾ; ಯಾರಿಗೆ ಕಾಂಗ್ರೆಸ್ ಟಿಕೆಟ್?

ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಪೈಪೋಟಿ ಏರ್ಪಟ್ಟಿದೆ. ಇದುವರೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಮಾತ್ರ  ಆಕಾಂಕ್ಷಿಯಾಗಿದ್ದರು.
ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ

ಧಾರವಾಡ: ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಪೈಪೋಟಿ ಏರ್ಪಟ್ಟಿದೆ. ಇದುವರೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಮಾತ್ರ  ಆಕಾಂಕ್ಷಿಯಾಗಿದ್ದರು. ಇದೀಗ ವೈದ್ಯೆ ಸೀಮಾ ಸಾದಿಖಾ ಕೂಡ ಆಕಾಂಕ್ಷಿಯಾಗಿ ಮುನ್ನೆಲೆಗೆ ಬಂದಿದ್ದಾರೆ.

ಸಾದಿಖಾ ಅವರು 'ನಮ್ಮ ಮಿತ್ರ ಫೌಂಡೇಶನ್' ಅಡಿಯಲ್ಲಿ ಹಲವು ಸಮಾಜಮುಖಿ ಕೆಲಸ ಮಾಡಿದ್ದಾರೆ. ಬಡ ಮತ್ತು ನಿರ್ಗತಿಕರಿಗೆ ಆರೋಗ್ಯ ಆಧಾರಿತ ಸೇವೆಗಳನ್ನು ಒದಗಿಸಿದ್ದಾರೆ. ಅವರು ಸಾಮಾಜಿಕ ಸಮಸ್ಯೆಗಳ ಬಗ್ಗೆ ಕೆಲಸ ಮಾಡಿದ್ದಾರೆ.

ಬೀದಿ ದೀಪಗಳು, ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ಮತ್ತು ಇತರ ಮೂಲ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಈ ಹಿಂದೆ 2018ರ ಚುನಾವಣೆಯ ವೇಳೆ ಟಿಕೆಟ್ ಪಡೆಯಲು ಯತ್ನಿಸಿದ್ದರು, ಆದರೆ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಟಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ.

ಅವರು ದೂರದ ಹಳ್ಳಿಗಳಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡಿದ್ದಾರೆ, ಈ ಪ್ರದೇಶಗಳಲ್ಲಿ ಆರೋಗ್ಯ ಮತ್ತು ಶಿಕ್ಷಣವನ್ನು ಸುಧಾರಿಸಲು ತಮ್ಮ ಅತ್ಯುತ್ತಮ ಕೊಡುಗೆ ನೀಡಿದ್ದಾರೆ ಎಂದು ಕ್ಷೇತ್ರದ ಜನರು ಹೇಳಿದ್ದಾರೆ. ಅನೇಕ ಅವಿದ್ಯಾವಂತ ಯುವಕರು ಆಕೆ ಆಯೋಜಿಸಿದ ವಿವಿಧ ಉದ್ಯೋಗ ಆಧಾರಿತ ಕೋರ್ಸ್‌ಗಳ ತರಬೇತಿಯನ್ನು ಪಡೆದಿದ್ದಾರೆ.

ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ,  ಸ್ಪರ್ಧೆಯು ಅದೇ ವೇಗದಲ್ಲಿ ಬೆಳೆದರೆ,  ಇದರ ಲಾಭ ಪಡೆದು ಎದುರಾಳಿ ಪಕ್ಷವು ಗೆಲುವು ಸಾಧಿಸಬಹುದು ಎಂದು ಕಾರ್ಯಕರ್ತರು ಹೇಳಿದ್ದಾರೆ. ಪ್ರಸಾದ್ ಅಬಯ್ಯ ಅಭ್ಯರ್ಥಿಯಾಗಬಹುದು ಎಂದು ಪಕ್ಷದ ಹಿರಿಯ ನಾಯಕರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com