ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲೂ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ: ಅರವಿಂದ್ ಕೇಜ್ರಿವಾಲ್
ರಾಜ್ಯ ವಿಧಾನಸಭೆ ಚುನಾವಣೆಗೆ ಬುಧವಾರ ಮುಹೂರ್ತ ಫಿಕ್ಸ್ ಆಗಿದ್ದು, ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲೂ ಆಮ್ ಆದ್ಮಿ ಪಕ್ಷ(ಎಎಪಿ) ಸ್ಪರ್ಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್...
Published: 29th March 2023 07:57 PM | Last Updated: 30th March 2023 01:54 PM | A+A A-

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಬುಧವಾರ ಮುಹೂರ್ತ ಫಿಕ್ಸ್ ಆಗಿದ್ದು, ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲೂ ಆಮ್ ಆದ್ಮಿ ಪಕ್ಷ(ಎಎಪಿ) ಸ್ಪರ್ಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಎಎಪಿ ಭರ್ಜರಿ ಸಿದ್ಧತೆ ನಡೆಸಿದ್ದು, ಈಗಾಗಲೇ ತನ್ನ 80 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಲ್ಲದೆ ವಿಧಾನಸಭೆ ಚುನಾವಣೆಗೆ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಇದನ್ನು ಓದಿ: ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವ ಕುರಿತು ಪರಿಶೀಲನೆ: ಚುನಾವಣಾ ಆಯೋಗ
ಕೇಂದ್ರ ಚುನಾವಣಾ ಆಯೋಗ ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.