ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ: ಶಿವಮೊಗ್ಗ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಎಚ್ಚರಿಕೆ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದ ವಿವಿಧ ವಾರ್ಡ್ಗಳ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.
Published: 29th March 2023 02:17 PM | Last Updated: 29th March 2023 02:21 PM | A+A A-

ಶಿವಮೊಗ್ಗ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಪ್ರತಿಜ್ಞೆ
ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದ ವಿವಿಧ ವಾರ್ಡ್ಗಳ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಎರಡನೇ ಪಟ್ಟಿಯ ಸಿದ್ಧತೆ ನಡೆದಿದೆ. ಹೀಗಿರುವಾಗಲೇ ಶಿವಮೊಗ್ಗದ ಕಾಂಗ್ರೆಸ್ ಪಕ್ಷದ ವಾರ್ಡ್ ಅಧ್ಯಕ್ಷರು ಸಭೆ ನಡೆಸಿದ್ದು, ಸಭೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದಾರೆ.
ಶಿವಮೊಗ್ಗ ನಗರ ಕಾಂಗ್ರೆಸ್ ನ ಎಲ್ಲಾ 35 ವಾರ್ಡ್ ಅಧ್ಯಕ್ಷರು ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ 'ಹೊರಗಿನವರಿಗೆ' ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. @KannadaPrabha pic.twitter.com/hfcZDg46pW
— Marx Tejaswi (@_marxtejaswi) March 29, 2023
ಅಲ್ಲದೆ ಒಂದು ವೇಳೆ ಕ್ಷೇತ್ರದ ಹೊರಗಿನವರಿಗೆ ಟಿಕೆಟ್ ನೀಡಿದರು ತಾವು ಅವರಿಗಾಗಿ ಕೆಲಸ ಮಾಡುವುದಿಲ್ಲ.. ಅಲ್ಲದೆ ನಾವು ನಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ವೈರಲ್ ವಿಡಿಯೋ; ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರಿಗೆ 500 ರೂ ನೋಟು ಎಸೆದ ಡಿಕೆ ಶಿವಕುಮಾರ್
ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಟಿಕೆಟ್ ಹಂಚಿಕೆ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ವಾರ್ಡ್ ಅಧ್ಯಕ್ಷ ಒತ್ತಾಯವನ್ನು ಹೇಗೆ ಸ್ವೀಕರಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.