ತೆನೆ ಇಳಿಸಿ 'ಕೈ' ಹಿಡಿದ ಗುಬ್ಬಿ ಮಾಜಿ ಶಾಸಕ; ಎಸ್ ಆರ್ ಶ್ರೀನಿವಾಸ್ ಕಾಂಗ್ರೆಸ್ ಗೆ ಸೇರ್ಪಡೆ
ಇತ್ತೀಚೆಗೆ ಜೆಡಿಎಸ್ ತೊರೆದಿದ್ದ ತುಮಕೂರಿನ ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ಇಂದು ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
Published: 30th March 2023 12:55 PM | Last Updated: 30th March 2023 02:50 PM | A+A A-

ಎಸ್ ಆರ್ ಶ್ರೀನಿವಾಸ್ ರನ್ನು ಪಕ್ಷಕ್ಕೆ ಬರಮಾಡಿಕೊಂಡ ಡಿ ಕೆ ಶಿವಕುಮಾರ್
ಬೆಂಗಳೂರು: ಇತ್ತೀಚೆಗೆ ಜೆಡಿಎಸ್ ತೊರೆದಿದ್ದ ತುಮಕೂರಿನ ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ಇಂದು ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೈ ಪಕ್ಷದ ಶಾಲು ಹೊದಿಸಿ ಬಾವುಟ ನೀಡಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪಕ್ಷ ಸೇರ್ಪಡೆ ಕಾರ್ಯಕ್ರಮ, ಕೆಪಿಸಿಸಿ ಕಚೇರಿ https://t.co/5lU1Y7O7GY
— Karnataka Congress (@INCKarnataka) March 30, 2023