ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಯಿಲ್ಲ, ಶಿಕಾರಿಪುರದಲ್ಲಿಯೇ ನಿಲ್ಲಬೇಕೆಂಬುದು ನಾನು ಸಲಹೆ: ಬಿ ಎಸ್ ಯಡಿಯೂರಪ್ಪ

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಎದುರು ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ವರುಣಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆಯನ್ನು ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತಳ್ಳಿಹಾಕಿದ್ದು, ವಿಜಯೇಂದ್ರ ಅವರು ಶಿಕಾರಿಪುರದಿಂದಲೇ ಚುನಾವಣೆ ಎದುರಿಸುವುದಾಗಿ ಹೇಳಿದ್ದಾರೆ.
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಎದುರು ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ವರುಣಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆಯನ್ನು ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತಳ್ಳಿಹಾಕಿದ್ದು, ವಿಜಯೇಂದ್ರ ಅವರು ಶಿಕಾರಿಪುರದಿಂದಲೇ ಚುನಾವಣೆ ಎದುರಿಸುವುದಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ವರುಣಾದಿಂದ ಕಣಕ್ಕಿಳಿಸಲು ಈಗಾಗಲೇ ಒತ್ತಡವಿದೆ, ವರುಣಾದಿಂದ ಒತ್ತಡವಿದ್ದರೂ ಶಿಕಾರಿಪುರದಿಂದ ಸ್ಪರ್ಧಿಸಬೇಕು ಎಂದು ಬಹಳ ಹಿಂದೆಯೇ ಹೇಳಿದ್ದೆ, ಹಾಗಾಗಿ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದರು. 

ವಿಜಯೇಂದ್ರ ನನ್ನ ಕ್ಷೇತ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ, ಹೀಗಾಗಿ ವರುಣಾದಿಂದ ಸ್ಪರ್ಧಿಸುವಂತೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಛರಿಸಿದರು. 

ಬಿಜೆಪಿಗೆ ಸ್ವಂತ ಬಲವಿದೆ, ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂಬ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಅವರ ಹೇಳಿಕೆ ಸರಿಯಾಗಿದೆ, ಆದರೆ ನಾನು ಶಿಕಾರಿಪುರದಿಂದ ಸ್ಪರ್ಧಿಸಬೇಕು ಎಂದು ಹೇಳುತ್ತಿದ್ದೇನೆ, ಅದನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತೇನೆ ಎಂದರು. 

ಯಡಿಯೂರಪ್ಪ ಶಿಕಾರಿಪುರದ ಹಾಲಿ ಶಾಸಕರಾಗಿದ್ದು, ಈಗಾಗಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. 
ಮೇ 10 ರಂದು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಯಡಿಯೂರಪ್ಪನವರು, ವರುಣಾದಲ್ಲಿ ತಮ್ಮ ಮಗ ಕಣಕ್ಕಿಳಿಯುವ ಸಾಧ್ಯತೆಯನ್ನು ಹೇಳಿದ್ದು, ವರುಣಾದಲ್ಲಿ ಸಿದ್ದರಾಮಯ್ಯ ಜೊತೆಗಿನ ಸ್ಪರ್ಧೆ ಹೈವೋಲ್ಟೇಜ್ ಹೋರಾಟದ ಕಣವಾಗಿ ಮಾರ್ಪಡಬಹುದು ಎಂದು ಹೇಳಿದ್ದರು. 

ಕಾಂಗ್ರೆಸ್ ಶಾಸಕಾಂಗ ಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಸ್ತುತ ತಮ್ಮ ಪುತ್ರ ಯತೀಂದ್ರ ಅವರನ್ನು ಪ್ರತಿನಿಧಿಸುತ್ತಿರುವ ವರುಣಾದಲ್ಲಿ ಅಖಾಡಕ್ಕಿಳಿಯಲು ಸಜ್ಜಾಗಿರುವುದರಿಂದ ಮೈಸೂರು ಜಿಲ್ಲೆಯ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ. 

ಇನ್ನು ನಾಲ್ಕೈದು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಹ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com