ಬಿಜೆಪಿ, ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ: ಹೆಚ್'ಡಿ ಕುಮಾರಸ್ವಾಮಿ

ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಬಲಗೊಳ್ಳುತ್ತಿದ್ದು, ಈ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಂಡಿದ್ದು ಕೆಲವರು ತಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಬಲಗೊಳ್ಳುತ್ತಿದ್ದು, ಈ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಂಡಿದ್ದು ಕೆಲವರು ತಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಎರಡೂ ಪಕ್ಷಗಳಲ್ಲಿ ಪೈಪೋಟಿ ಇದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲವರು ನನ್ನನ್ನು ಸಂಪರ್ಕಿಸಿದ್ದಾರೆ. ಆದರೆ, ನಾವು ಸ್ವಂತವಾಗಿ ಬಹುಮತ ಪಡೆಯುವ ಗುರಿಯನ್ನು ಹೊಂದಿದ್ದೇವೆ. ಸಮ್ಮಿಶ್ರ ಸರ್ಕಾರ ರಚಿಸಲು 60-65 ಸ್ಥಾನಗಳ ಗೆಲ್ಲುವ ಬಗ್ಗೆ ಯೋಚಿಸುತ್ತಿಲ್ಲ ಎಂದು ಹೇಳಿದ್ದಾರೆ.

ಎಸಿ ರೂಮ್ ಗಳಲ್ಲಿ ಕುಳಿತುಕೊಂಡು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು 140 ಸ್ಥಾನಗಳ ಗೆಲ್ಲುತ್ತೇವೆಂದು ಹೇಳುತ್ತಿದ್ದಾರೆ. ಆದರೆ, ನಾವು ಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ವಾಸ್ತವತೆಯನ್ನು ತಿಳಿದಿದ್ದೇವೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಸ್ವಂತ ಬಲದಿಂದ ಬಹುಮತ ಪಡೆಯುವ ವಿಶ್ವಾಸವಿದೆ ಎಂದು ತಿಳಿಸಿದರು.

ಇದೇ ವೇಳೆ ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಬಿಜೆಪಿ ನಾಯಕರಿಗೆ ಕುಮಾರಸ್ವಾಮಿಯವರು ಎಚ್ಚರಿಕೆಯನ್ನು ನೀಡಿದರು.

ರಾಷ್ಟ್ರೀಯ ಪಕ್ಷಗಳು ಸಮೀಕ್ಷೆಗಳನ್ನು ನಡೆಸುತ್ತಿವೆ. ಕಳೆದ ಚುನಾವಣೆಯಲ್ಲಿಯೂ ಇದೇ ರೀತಿಯ ಪ್ರಯತ್ನಗಳನ್ನು ಮಾಡಿತ್ತು. ಆ ಸಮೀಕ್ಷೆಗಲು ಕಾಂಗ್ರೆಸ್ ಪಕ್ಷ 120 ಸ್ಥಾನಗಳನ್ನು ಗೆಲಲ್ಲಿದೆ ಎಂದು ಹೇಳಿತ್ತು. ಆದರೆ, ಅದು ಸುಳ್ಳಾಗಿತ್ತು. ಈ ಸಮೀಕ್ಷೆಗಳು ಪಾವತಿಸಿದ ಸಮೀಕ್ಷೆಗಳಾಗಿವೆ ಎಂದು ವ್ಯಂಗ್ಯವಾಡಿದರು.

2018ರ ಚುನಾವಣೆಯ ನಂತರ ಜೆಡಿಎಸ್ ಜೊತೆಗೆ ಕೈಜೋಡಿಸಿದ್ದ ಕಾಂಗ್ರೆಸ್ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿತ್ತು. ಆದರೆ, ಕಾಂಗ್ರೆಸ್ ಪಕ್ಷ 17 ಮಂದಿ ಶಾಸಕರು ಹಾಗೂ ಜೆಡಿಎಸ್'ನ ಕೆಲ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com