ರಾಜ್ಯ ವಿಧಾನಸಭಾ ಚುನಾವಣೆ: ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲು

ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಬಿಬಿಎಂಪಿ ಕಾರ್ಪೋರೇಟರ್ ಕೆ. ಮುನೀಂದ್ರ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ.
ಕೃಷ್ಣ ಭೈರೇಗೌಡ
ಕೃಷ್ಣ ಭೈರೇಗೌಡ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲಿ ಮತದಾರರಿಗೆ ಹಂಚಲು ಗೋದಾಮೊಂದರಲ್ಲಿ ಕೋಟ್ಯಂತರ ರೂ.ಮೌಲ್ಯದ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪದ ಮೇರೆಗೆ ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಬಿಬಿಎಂಪಿ ಕಾರ್ಪೋರೇಟರ್ ಕೆ. ಮುನೀಂದ್ರ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ.

ಕ್ಷೇತ್ರದ ಶಾಸಕ ಕೃಷ್ಣ ಭೈರೇಗೌಡ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದ ನಂತರ ಕೇಸ್ ದಾಖಲಾಗಿದೆ.ತನಿಖಾ ವರದಿಯಂತೆ ಮಾರ್ಚ್ 28 ರಂದು ಕೃಷ್ಣಮಾಚಾರಿ ಮಂಜುನಾಥ್ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಫ್‌ಐಆರ್ ದಾಖಲಾಗಿದೆ.

Complaint lodged to Election Commission on the bias of Election Officers and favouring BJP candidates by not booking a case on potential BJP candidate who had stored ₹3.6 CRORE worth material to bribe voters. 1/2 #ElectionCommission #byatarayanapura pic.twitter.com/O315HSCMWV

ವಶಪಡಿಸಿಕೊಂಡ ವಸ್ತುಗಳ ಮೇಲೆ ಮಾಜಿ ಕಾರ್ಪೊರೇಟರ್ ಮುನೀಂದ್ರ ಕುಮಾರ್ ಅವರ ಭಾವಚಿತ್ರ ಮತ್ತು ಬಿಜೆಪಿ ಪಕ್ಷದ ಚಿಹ್ನೆ ಕಂಡುಬಂದಿರುವುದರಿಂದ ಪ್ರಕರಣದಲ್ಲಿ ಮುನೇಂದ್ರ ಕುಮಾರ್ ಅವರನ್ನು ಆರೋಪಿಯನ್ನಾಗಿ ಮಾಡಲು ಮತ್ತು ಹೆಚ್ಚಿನ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ಅನುಮತಿಯನ್ನು ಪಡೆಯಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಮತ್ತೊಂದು ಪ್ರಕರಣದಲ್ಲಿ ಹಯಗ್ರೀವ ಪಬ್ಲಿಕ್ ಶಾಲೆಯ ಆಡಳಿತದ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿಯೂ ವಶಕ್ಕೆ ಪಡೆಯಲಾದ ವಸ್ತುಗಳಲ್ಲಿ ಮಾಜಿ ಕಾರ್ಪೊರೇಟರ್ ಮುನೇಂದ್ರ ಕುಮಾರ್ ಅವರ ಫೋಟೋ ಮತ್ತು ಬಿಜೆಪಿ ಪಕ್ಷದ ಚಿಹ್ನೆಯು ಕಂಡುಬಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com