ಸಿದ್ದರಾಮಯ್ಯ ಪಾಳೇಗಾರಿಕೆ ಮಾಡುತ್ತಾ ದೇವೇಗೌಡರನ್ನು ಹೆದರಿಸಿಟ್ಟುಕೊಂಡಿದ್ದರು; ಸಭೆಯಿಂದ ಟವಲ್ ಕೊಡವಿಕೊಂಡು ಎದ್ದು ಹೋಗಿದ್ದರು: ಎಚ್‌ ಡಿಕೆ

ಜೆಡಿಎಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಪಾಳೇಗಾರಿಕೆ ಮಾಡುತ್ತಾ ದೇವೇಗೌಡರನ್ನು ಹೆದರಿಸಿಟ್ಟುಕೊಂಡಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷ ಕಟ್ಟಿ ಎರಡು ಸ್ಥಾನ ಗೆಲ್ಲಿಸಲಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ಸಿದ್ದರಾಮಯ್ಯ ಮತ್ತು ಎಚ್.ಡಿ ದೇವೇಗೌಡ
ಸಿದ್ದರಾಮಯ್ಯ ಮತ್ತು ಎಚ್.ಡಿ ದೇವೇಗೌಡ

ಬೆಂಗಳೂರು: ಜೆಡಿಎಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಪಾಳೇಗಾರಿಕೆ ಮಾಡುತ್ತಾ ದೇವೇಗೌಡರನ್ನು ಹೆದರಿಸಿಟ್ಟುಕೊಂಡಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷ ಕಟ್ಟಿ ಎರಡು ಸ್ಥಾನ ಗೆಲ್ಲಿಸಲಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬ್ಯಾನರ್‌ನಲ್ಲಿ ತಮ್ಮ ಭಾವಚಿತ್ರ ಇಲ್ಲ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಇಕ್ಬಾಲ್‌ ಅನ್ಸಾರಿ ಅವರನ್ನು ಮಂತ್ರಿಮಾಡಬೇಡಿ‌ ಅಂತ ಗಲಾಟೆ ಮಾಡಿದ್ದರು. 

ಆನಂತರ ಸಭೆಯಿಂದ ಟವಲ್ ಕೊಡವಿಕೊಂಡು ಎದ್ದು ಹೋಗಿದ್ದರು. ಹೋಗುವಾಗ ಎಂಟು ಶಾಸಕರನ್ನು ಕರೆದುಕೊಂಡು ಹೋಗಿದ್ದರು. ಅವರಲ್ಲಿ ಎಷ್ಟು ಜನರನ್ನು ಗೆಲ್ಲಿಸಿಕೊಂಡರು? ಅವರಿಗೆ ಈ ಬಾರಿ ಜನರ ಮೂಲಕ ಉತ್ತರ ಕೊಡಿಸುತ್ತೇನೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್‌–ಬಿಜೆಪಿ ಒಟ್ಟಾಗಿ ಜೆಡಿಎಸ್ ವಿರುದ್ಧ ಷಡ್ಯಂತ್ರ ರೂಪಿಸುತ್ತಿವೆ. ಒಳ ಒಪ್ಪಂದ ಮಾಡಿಕೊಂಡು ಪರಸ್ಪರ ಎ ಟೀಂ, ಬಿ ಟೀಂಗಳಂತೆ ಕೆಲಸ ಮಾಡುತ್ತಿವೆ.

ಹೈದರಾಬಾದ್‌ನಲ್ಲಿ ಕಾಂಗ್ರೆಸ್‌ ನಾಯಕರ ಜತೆ ಜೆಡಿಎಸ್‌ ಮಾತುಕತೆ ಮಾಡಿದೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ಬಿಜೆಪಿ ಜತೆ ಒಳ ಒಪ್ಪಂದವಾಗಿದೆ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡುತ್ತಾರೆ. ಎರಡೂ ಪಕ್ಷಗಳಿಗೆ ಬೇರೆ ವಿಷಯ ಇಲ್ಲವೇ ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com