ನಾನು ಶಿಕಾರಿಪುರದಿಂದ ಸ್ಪರ್ಧಿಸದ ಕಾರಣ ವಿಜಯೇಂದ್ರ ಅಲ್ಲಿಂದಲೇ ಸ್ಪರ್ಧೆ, ವರುಣಾಗೆ ಬೇರೆ ಸಮರ್ಥ ಅಭ್ಯರ್ಥಿ ನಿಲ್ಲಿಸುತ್ತೇವೆ: ಬಿ ಎಸ್ ಯಡಿಯೂರಪ್ಪ

ಪುತ್ರ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ, ಅವನು ನಾನು ಪ್ರತಿನಿಧಿಸುತ್ತಾ ಬಂದಿರುವ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿಯೇ ಈ ಬಾರಿ ಚುನಾವಣೆಗೆ ನಿಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ.
ಬಿ ವೈ ವಿಜಯೇಂದ್ರ ಮತ್ತು ಬಿ ಎಸ್ ಯಡಿಯೂರಪ್ಪ(ಸಂಗ್ರಹ ಚಿತ್ರ)
ಬಿ ವೈ ವಿಜಯೇಂದ್ರ ಮತ್ತು ಬಿ ಎಸ್ ಯಡಿಯೂರಪ್ಪ(ಸಂಗ್ರಹ ಚಿತ್ರ)

ಮೈಸೂರು: ಪುತ್ರ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ, ಅವನು ನಾನು ಪ್ರತಿನಿಧಿಸುತ್ತಾ ಬಂದಿರುವ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿಯೇ ಈ ಬಾರಿ ಚುನಾವಣೆಗೆ ನಿಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾದಿಂದ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿತ್ತು. ಆದರೆ ನಾನೇ ವರುಣಾದಿಂದ ಸ್ಪರ್ಧೆ ಬೇಡವೆಂದು ಹೇಳಿದ್ದೇನೆ ಎಂದರು.

ಈ ವಿಚಾರದಲ್ಲಿ ನಾನು ಹೈಕಮಾಂಡ್ ಮನವೊಲಿಸುತ್ತೇನೆ. ಯಾವ ಕಾರಣಕ್ಕೂ ವಿಜಯೇಂದ್ರ ವರುಣಾದಿಂದ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಕಾರ್ಯಕರ್ತರು ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ. ಶಿಕಾರಿಪುರ ಬಿಟ್ಟು ಅವರು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ ಮಾಡುತ್ತಾರೆ. ವರುಣಾ ಕ್ಷೇತ್ರದಿಂದ ಒಳ್ಳೆ ಅಭ್ಯರ್ಥಿ ಹಾಕುತ್ತೇವೆ. ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಗೆ ಇತ್ತು. ಆದರೆ ನಾನೇ ಶಿಕಾರಿಪುರದಿಂದ ನಿಲ್ಲಬೇಕು ಅಂಥ ಹೇಳಿದ್ದೇನೆ. ಹೈಕಮಾಂಡ್‌ಗೆ ನಾನೇ ಈ ವಿಚಾರದಲ್ಲಿ ಮನವೊಲಿಸುತ್ತೇನೆ ಎಂದು ಹೇಳಿದರು.

ನಾನು ಶಿಕಾರಿಪುರದಿಂದ ಸ್ಪರ್ಧೆ ಮಾಡದ ಕಾರಣ ವಿಜಯೇಂದ್ರ ಅಲ್ಲಿಂದ ಸ್ಪರ್ಧೆ ಮಾಡಬೇಕು. ಇದು ನನ್ನ ನಿರ್ಧಾರ. ವಿಜಯೇಂದ್ರ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಶಿಕಾರಿಪುರ ನನ್ನನ್ನು ಸಿಎಂ ಮಾಡಿದ ಕ್ಷೇತ್ರ ಆ ಕ್ಷೇತ್ರವನ್ನ ಬಿಡಲು ಸಾಧ್ಯವಿಲ್ಲ. ವರುಣಾದಲ್ಲಿ ಸ್ಪರ್ಧೆ ವಿಚಾರ ಚರ್ಚೆ ಬೇಡ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com