ಕಾಂಗ್ರೆಸ್ ಅಧಿಕಾರಕ್ಕೆ ಬಂಧರೆ ಗಲಭೆಗಳು ಹೆಚ್ಚಾಗುತ್ತವೆ: ಅಮಿತ್ ಶಾ ಆಯ್ತು, ಈಗ ಜೆಪಿ ನಡ್ಡಾ ಹೇಳಿಕೆ!

ಕಾಂಗ್ರೆಸ್ ಗೆದ್ದರೆ ಗಲಭೆ ನಡೆಯುತ್ತದೆ ಎಂಬ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಪ್ರಕರಣ ದಾಖಲಿಸಿದ್ದಾರೆ. ಇದೀಗ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆ ಸಂಭವಿಸುತ್ತದೆ ಎಂದು ಹೇಳಿದ್ದಾರೆ.
ಜೆಪಿ ನಡ್ಡಾ
ಜೆಪಿ ನಡ್ಡಾ
Updated on

ಹೊನ್ನಾಳಿ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಗಲಭೆ ನಡೆಯುತ್ತದೆ ಎಂಬ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಪ್ರಕರಣ ದಾಖಲಿಸಿದ್ದಾರೆ. ಇದೀಗ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆ ಸಂಭವಿಸುತ್ತದೆ ಎಂದು ಹೇಳಿದ್ದಾರೆ.

ಭಾನುವಾರ ಹೊನ್ನಾಳಿಯಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಡ್ಡಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗಲಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಧಕ್ಕೆಯಾಗಲಿದೆ. ಆದ್ದರಿಂದ, ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ಮರು ಆಯ್ಕೆ ಮಾಡುವ ಮೂಲಕ ಡಬಲ್ ಇಂಜಿನ್ ಸರ್ಕಾರಕ್ಕೆ ಮತ ನೀಡಿ ಎಂದರು.

ಶಿವಮೊಗ್ಗದಲ್ಲಿ ಹರ್ಷ ಮತ್ತು ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಅವರಂತಹ ಕೆಲವು ಹಿಂದೂ ಕಾರ್ಯಕರ್ತರ ಕೊಲೆಗಳಿಗೆ ಕಾರಣವಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಚಟುವಟಿಕೆಗಳನ್ನು ಪರಿಶೀಲಿಸುವಲ್ಲಿ 2013ರಿಂದ 2018ರವರೆಗಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ವಿಫಲವಾಗಿದೆ ಎಂದು ಹೇಳಿದರು. 

ರಾಜ್ಯ ಸರ್ಕಾರದ ವಿರುದ್ಧ ಶೇ 40 ರಷ್ಟು ಕಮಿಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿದ ನಡ್ಡಾ, 2013 ರಿಂದ 2018 ರವರೆಗೆ ಸಿದ್ದರಾಮಯ್ಯನವರು ಸಿಎಂ ಆಗಿದ್ದ ಅವಧಿಯಲ್ಲಿ ಪ್ರತಿ ವರ್ಷವೂ ಹಗರಣಗಳು ನಡೆಯುತ್ತಿದ್ದವು. ಶಿಕ್ಷಕರ ನೇಮಕಾತಿ ಹಗರಣ, ಪೊಲೀಸ್ ನೇಮಕಾತಿ ಹಗರಣ, ಸ್ಟೀಲ್ ಬ್ರಿಡ್ಜ್ ಹಗರಣ, ಮಲಪ್ರಭಾ ಕಾಲುವೆ ಅಭಿವೃದ್ಧಿ ಹಗರಣ, ಅರ್ಕಾವತಿ ಲೇಔಟ್ ಹಗರಣಗಳು ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದಿದೆ ಎಂದು ಆರೋಪಿಸಿದರು. 

'ಕಾಂಗ್ರೆಸ್ ಸರ್ಕಾರ ಎಲ್ಲಾ ಹಗರಣಗಳನ್ನು ಚೆನ್ನಾಗಿ ನಿರ್ವಹಿಸಿದೆ. ಹಗರಣ ಮತ್ತು ಕಮಿಷನ್ ಪದವು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಹೆಸರಿನ ಸಮಾನಾರ್ಥಕವಾಗಿದೆ' ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com