ಫೋಟೋಗಳಿಗಷ್ಟೇ ದಲಿತರನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶೈಕ್ಷಣಿಕ ಸುಧಾರಣೆಗಳಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಕ್ಷಣ ಪಡೆದಿದ್ದಾರೆ ಹಾಗೂ ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಕಾಂಗ್ರೆಸ್‌ನಿಂದಾಗಿ ಇಬ್ಬರೂ ಈಗ ಉನ್ನತ ಸ್ಥಾನಗಳಲ್ಲಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾ
ಶಿವಮೊಗ್ಗದಲ್ಲಿ ಮಲ್ಲಿಕಾರ್ಜುನ ಖರ್ಗೆ.
ಶಿವಮೊಗ್ಗದಲ್ಲಿ ಮಲ್ಲಿಕಾರ್ಜುನ ಖರ್ಗೆ.

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶೈಕ್ಷಣಿಕ ಸುಧಾರಣೆಗಳಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಕ್ಷಣ ಪಡೆದಿದ್ದಾರೆ ಹಾಗೂ ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಕಾಂಗ್ರೆಸ್‌ನಿಂದಾಗಿ ಇಬ್ಬರೂ ಈಗ ಉನ್ನತ ಸ್ಥಾನಗಳಲ್ಲಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಮೇಲಿನ ಮೌಖಿಕ ನಿಂದನೆಗಳನ್ನು ಮೋದಿಯವರು ಹೇಗೆ ಲೆಕ್ಕ ಹಾಕುತ್ತಿದ್ದಾರೆಂಬುದು ನನಗೆ ತಿಳಿಯುತ್ತಿಲ್ಲ. ಆದರೆ, ಮೋದಿಯವರು ಎಷ್ಟು ಬಾರಿ (ಎಐಸಿಸಿ ಮಾಜಿ ಅಧ್ಯಕ್ಷರು) ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂಬುದರ ಬಗ್ಗೆ ನನ್ನ ಬಳಿ ಅಧಿಕೃತ ಮಾಹಿತಿಗಳಿವೆ. ಜನರ ಸಹಾನುಭೂತಿ ಪಡೆಯಲು ಮೋದಿ ಈ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನಿಸಿದೆ ಎಂಬ ಮೋದಿಯವರ ಆರೋಪವನ್ನು ಖರ್ಗೆ ಅವರು ನಿರಾಕರಿಸಿದರು,

ಇದೇ ವೇಳೆ ಸಂವಿಧಾನದ ಕರಡು ಜವಾಬ್ದಾರಿಯನ್ನು ಕಾಂಗ್ರೆಸ್‌ ಪಕ್ಷಕ್ಕೆ ವಹಿಸಿದ್ದ ಅಂಬೇಡ್ಕರ್ ಅವರನ್ನು ಖರ್ಗೆಯವರು ಕೊಂಡಾಡಿದರು.

ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ದಲಿತರನ್ನು ಫೋಟೋಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಆರ್‌ಎಸ್‌ಎಸ್ ಕಚೇರಿಯಲ್ಲಿ ಅಂಬೇಡ್ಕರ್ ಅವರ ಫೋಟೋ ಇಲ್ಲದಿದ್ದರೂ ಬಿಜೆಪಿಯವರು ಅಂಬೇಡ್ಕರ್ ಅವರ ಹೆಸರನ್ನು ಮತ ಭಿಕ್ಷೆಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

ಅಮಿತ್ ಶಾ ದಲಿತರನ್ನು ಫೋಟೋಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದಲಿತರ ಮನೆಯಲ್ಲಿ ಊಟ ಮಾಡುವುದನ್ನು ಮಾಧ್ಯಮಗಳಲ್ಲಿ ಪ್ರಕಟಿಸುವ ಅಗತ್ಯವಿದೆಯೇ? ಅವರು ಮನುಷ್ಯರಲ್ಲವೇ? ಇತ್ತೀಗಷ್ಟೇ ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ಬಿಜೆಪಿ ನಾಯಕರು ತಮ್ಮ ಕಚೇರಿಗಳಲ್ಲಿ ಅಂಬೇಡ್ಕರ್ ಅವರ ಫೋಟೋಗಳನ್ನು ಇಟ್ಟುಕೊಂಡರು. ಆರಾಧಿಸದ ಅಂಬೇಡ್ಕರ್ ಅವರ ಹೆಸರಿನಲ್ಲಿ ಮತ ಯಾಚಿಸಲು ಅವರಿಗ ನಾಚಿಕೆಯಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.

1947 ರಿಂದ 2014 ರವರೆಗೆ ದೇಶದಲ್ಲಿ 70% ರಷ್ಟು ವಿದ್ಯಾವಂತರಿದ್ದರೆ, ಸ್ವಾತಂತ್ರ್ಯದ ಮೊದಲು ಪ್ರತಿ 100 ಕ್ಕೆ 16 ಜನ ವಿದ್ಯಾವಂತರಿದ್ದರು. ಆ ವಿದ್ಯಾವಂತರಲ್ಲಿ ಮೋದಿ ಮತ್ತು ಶಾ ಕೂಡ ಇದ್ದಾರೆ. ಆದರೂ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಾರೆ. ನಾವು ನಿಮಗೆ ಶಿಕ್ಷಣ ನೀಡಿದ್ದೇವೆಂದು ತಿರುಗೇಟು ನೀಡಿದರು.

ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಿದ್ದೇವೆ ಮತ್ತು ಇದರಿಂದಾಗಿ ಮೋದಿ ಪ್ರಧಾನಿಯಾದರು. ಆದ್ದರಿಂದ ನೀವು ಕಾಂಗ್ರೆಸ್‌ಗೆ ಪೂಜೆ ಸಲ್ಲಿಸಬೇಕು ಎಂದರು.

ಇದೇ ವೇಳೆ ಅಗತ್ಯ ವಸ್ತುಗಳ ಮೇಲೆ ಅತಿಯಾದ ತೆರಿಗೆ ವಿಧಿಸುತ್ತಿರುವ ಮೋದಿ ಸರಕಾರವನ್ನು ಟೀಕಿಸಿದ ಖರ್ಗೆಯವರು, ಮುಂದಿನ ದಿನಗಳಲ್ಲಿ ನಾವು ಉಸಿರಾಡುವ ಗಾಳಿಗೂ ತೆರಿಗೆ ವಿಧಿಸಿದರೂ ಅಚ್ಚರಿಯಿಲ್ಲ ಎಂದು ಲೇವಡಿ ಮಾಡಿದರು.

ನಂತರ ಸೊರಬ ಕ್ಷೇತ್ರದ ಆನವಟ್ಟಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ನಟ ಶಿವರಾಜಕುಮಾರ್, ಖರ್ಗೆ ಅವರು, ಉದ್ಯೋಗ ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ವಿಫಲವಾಗಿದ್ದು, ಕೇಂದ್ರ ಸರ್ಕಾರದ 30 ಲಕ್ಷ ಹಾಗೂ ರಾಜ್ಯ ಸರ್ಕಾರದ 2 ಲಕ್ಷ ಉದ್ಯೋಗಗಳನ್ನು ಇನ್ನೂ ಭರ್ತಿ ಮಾಡಿಲ್ಲ ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com