ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಸಾಂದರ್ಭಿಕ ಚಿತ್ರ
ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಸಾಂದರ್ಭಿಕ ಚಿತ್ರ

ಕರ್ನಾಟಕ ಚುನಾವಣೆ: ಪ್ರಚಾರಕ್ಕೆ ಮೋದಿ ಎಂಟ್ರಿ ನಂತರ ಬದಲಾದ ಸರ್ವೇ ಲೆಕ್ಕಾಚಾರ!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ಚಾನೆಲ್ ಗಳು, ಸಂಸ್ಥೆಗಳು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಬಹುತೇಕ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಎಂದೇ  ಹೇಳಲಾಗುತಿತ್ತು.

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ಚಾನೆಲ್ ಗಳು, ಸಂಸ್ಥೆಗಳು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಬಹುತೇಕ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಎಂದೇ  ಹೇಳಲಾಗುತಿತ್ತು.

ಆದರೆ, ಪ್ರಧಾನಿ ನರೇಂದ್ರ ಮೋದಿ ಎಂಬ ಬಿರುಗಾಳಿ ಪ್ರಚಾರದ ಅಖಾಡಕ್ಕೆ ಅಪ್ಪಳಿಸುತ್ತಿದ್ದಂತೆಯೇ ಈ ಸಮೀಕ್ಷೆಗಳೆಲ್ಲಾ ಬದಲಾಗಿದೆ ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ. ಈ ಸಂಬಂಧ ನ್ಯೂಸ್ 18 ಕನ್ನಡ ಮತ್ತು ಕನ್ವರ್ಜೆಂಟ್ ಸಂಸ್ಥೆಯಿಂದ ಚುನಾವಣಾ ಪೂರ್ವ ಸಮೀಕ್ಷೆ ಮಾಹಿತಿಯನ್ನು ಹಂಚಿಕೊಂಡಿದೆ.ಈ ಸಂಸ್ಥೆಗಳು ಇತ್ತೀಚಿಗೆ ನಡೆಸಿದ ಸಮೀಕ್ಷೆ ಪ್ರಕಾರ ಬಿಜೆಪಿ 105, ಕಾಂಗ್ರೆಸ್ 87 ಹಾಗೂ ಜೆಡಿಎಸ್ 32 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಲಾಗಿದೆ.

ಈ ಅಂಕಿ ಅಂಶಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ, ಟಿಕೆಟ್ ಹಂಚಿಕೆ, ಪ್ರಧಾನಿ ಮೋದಿ ಪ್ರಚಾರ ಆರಂಭಿಸಿದ ನಂತರ ನಡೆಸಲಾದ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ, ಬಿಜೆಪಿ 105 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದನ್ನು ತೋರಿಸಲಾಗಿದೆ. ಬಿಜೆಪಿ ಬಹುಮತ ಪಡೆಯಲು ಇನ್ನೂ 10 ಸ್ಥಾನಗಳ ಅಗತ್ಯವಿದೆ. ಪ್ರಚಾರ ಮುಗಿಯುವುದರೊಳಗೆ ಅಷ್ಟು ಸ್ಥಾನಗಳನ್ನು ಪಡೆಯುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.

ಜೀ ನ್ಯೂಸ್ ಸಮೀಕ್ಷೆಯಲ್ಲೂ ಬಿಜೆಪಿ 103-115, ಕಾಂಗ್ರೆಸ್ 79-91, ಜೆಡಿಎಸ್ 26-36 ಇತರರು 1-3 ಕ್ಷೇತ್ರ ಪಡೆಯುವುದಾಗಿ ಹೇಳಲಾಗಿದೆ. 

Related Stories

No stories found.

Advertisement

X
Kannada Prabha
www.kannadaprabha.com