ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಪರೋಕ್ಷವಾಗಿ 'ನಾಲಾಯಕ್' ಎಂದು ಕರೆದಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಸಿ ವಿವಾದಕ್ಕೆ ಕಾರಣದ ಬೆನ್ನಲ್ಲೇ, ಪ್ರಿಯಾಂಕ್ ಖರ್ಗೆ ಕೂಡಾ ಸೋಮವಾರ ಮೋದಿ ಅವರನ್ನು 'ನಾಲಾಯಕ್ ' ಎಂದು ಕರೆದಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿಗೆ ‘ನಾಲಾಯಕ್’ ಎಂದ ಪ್ರಿಯಾಂಕ್ ಖರ್ಗೆ!
ಮೋದಿ ಮಳಖೇಡಕ್ಕೆ ಬಂದಾಗ ಬಂಜಾರಾ ಸಮಾಜದವರಿಗೆ ಏನು ಹೇಳಿದ್ರು? ಬಂಜಾರಾ ಸಮಾಜದ ಮಗ ದೆಹಲಿಯಲ್ಲಿದ್ದಾನೆ ಅಂತ ಮೋದಿ ಹೇಳಿದ್ದರು. ಆದರೆ ಇಂತಹ ನಾಲಾಯಕ್ ಮಗ ಇದ್ದರೆ ಹೇಗೆ ನಡೆಯುತ್ತೆ? ದೇಶ ನಡೆಸೋನು ಮಾತ್ರವಲ್ಲ. ಮನೆಯಲ್ಲಿ ಒಬ್ಬ ನಾಲಾಯಕ್ ಮಗನಿದ್ರೂ ಮನೆ ಸುಸೂತ್ರವಾಗಿ ನಡೆಯೋದಿಲ್ಲ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
ನಂತರ ಪ್ರಧಾನಿ ನರೇಂದ್ರ ಮೋದಿ ಕುರಿತು 'ನಾಲಾಯಕ್ ಮಗ' ಅಂತಾ ಪ್ರಿಯಾಂಕ್ ಖರ್ಗೆ ಹೇಳಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಪಪಡಿಸಿದರು.
Advertisement